ಬಿಎಡ್ ಪದವಿ ಪರೀಕ್ಷೆ: ಬ್ಯಾರೀಸ್ ವಿದ್ಯಾರ್ಥಿನಿ ಆಶಾಗೆ ರ‍್ಯಾಂಕ್

Update: 2023-03-17 12:46 GMT

ಕುಂದಾಪುರ, ಮಾ.17: ಮಂಗಳೂರು ವಿಶ್ವವಿದ್ಯಾನಿಲಯದ 2020-21ನೇ ಸಾಲಿನ 2022ರ ಮಾರ್ಚ್‌ನಲ್ಲಿ ನಡೆದ ಬಿ.ಎಡ್ ಪದವಿಯ ಅಂತಿಮ ಪರೀಕ್ಷೆಯಲ್ಲಿ ಬ್ಯಾರೀಸ್ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿನಿ ಆಶಾ ಶೇ.87.08 ಅಂಕಗಳೊಂದಿಗೆ 6ನೆ ರ‍್ಯಾಂಕ್ ಗಳಿಸಿದ್ದಾರೆ.

ರ‍್ಯಾಂಕ್ ಗಳಿಸಿದ ವಿದ್ಯಾರ್ಥಿನಿಗೆ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹಾಜಿ ಕೆ.ಎಂ.ಅಬ್ದುಲ್ ರಹ್ಮಾನ್, ಸಂಚಾಲಕ ಸಯ್ಯದ್ ಮಹಮ್ಮದ್ ಬ್ಯಾರಿ, ವಿಶ್ವಸ್ಥ ಮಂಡಳಿಯ ಸದಸ್ಯರು, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಅಭಿನಂದನೆ ಸಲ್ಲಿಸಿದ್ದಾರೆ.

Similar News