ಉಡುಪಿ ನಗರಸಭೆ ಅಧಿಕಾರಿ, ಸಿಬ್ಬಂದಿಗಳ ವಸತಿಗೃಹ ನಿರ್ಮಾಣಕ್ಕೆ ಚಾಲನೆ
Update: 2023-03-17 18:24 IST
ಉಡುಪಿ, ಮಾ.17: ಉಡುಪಿ ನಗರಸಭೆಯಿಂದ 2.45ಕೋಟಿ ರೂ. ವೆಚ್ಚದಲ್ಲಿ ನಗರಸಭೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ವಸತಿ ಗೃಹ ನಿರ್ಮಾಣ ಮತ್ತು 2.25 ಕೋಟಿ ವೆಚ್ಚದಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ ಇಂದು ಶಾಸಕ ಕೆ.ರಘುಪತಿ ಭಟ್ ಮಣಿಪಾಲದಲ್ಲಿ ಗುದ್ದಲಿ ಪೂಜೆಯನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಉಡುಪಿ ನಗರಸಭೆಯ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ ಕೊಳ, ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀಶ ಕೊಡವೂರು, ಸ್ಥಳೀಯ ನಗರಸಭಾ ಸದಸ್ಯರಾದ ಭಾರತಿ ಪ್ರಶಾಂತ್, ನಗರ ಸಭೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಯಶ್ವಂತ್ ಪ್ರಭು ಹಾಗೂ ನಗರ ಸಭಾ ಸದಸ್ಯರು ಉಪಸ್ಥಿತರಿದ್ದರು.