ಕಾರು ಅಪಘಾತ: ಬಂಟಕಲ್ಲು ಪ್ರಾಧ್ಯಾಪಕ ಸ್ಥಳದಲ್ಲಿಯೇ ಮೃತ್ಯು
Update: 2023-03-17 20:29 IST
ಉಡುಪಿ : ಹೊನ್ನಾವರ ಬಳಿ ಇಂದು ಮಧ್ಯಾಹ್ನ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಾಪು ತಾಲೂಕಿನ ಬಂಟಕಲ್ಲು ಶ್ರೀಮಧ್ವವಾದಿರಾಜ ತಾಂತ್ರಿಕ ಕಾಲೇಜಿನ ಮೆಕ್ಯಾನಿಕಲ್ ವಿಭಾಗದ ಹಿರಿಯ ಸಹಾಯಕ ಪ್ರಾಧ್ಯಾಪಕ ಅನಂತೇಶ್ ರಾವ್ (40) ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.
ಮಂಗಳೂರು ನಿವಾಸಿಯಾಗಿರುವ ಇವರು, ತಮ್ಮ ಕಾರಿನಲ್ಲಿ ಉಡುಪಿಯಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಸೋದೆ ಮೂಲಮಠಕ್ಕೆ ಹೋಗುತ್ತಿದ್ದರೆನ್ನಲಾಗಿದೆ. ಈ ವೇಳೆ ಕಂಟೈನರ್ ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯ ಗೊಂಡ ಇವರು ಸ್ಥಳದಲ್ಲಿಯೇ ಮೃತಪಟ್ಟರೆಂದು ತಿಳಿದುಬಂದಿದೆ.
ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.