ಮನೆ ಅಂಗಳದಲ್ಲಿ ಕುಸಿದು ಬಿದ್ದು ಮೃತ್ಯು

Update: 2023-03-17 15:01 GMT

ಮಲ್ಪೆ : ಮನೆಯಲ್ಲಿ ಬೈಕಿನಲ್ಲಿ ಹೊರಡಲು ಅಣಿಯಾಗುತ್ತಿದ್ದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಇಂದು ಬೆಳಗ್ಗೆ ಮಲ್ಪೆ ವಡಂಬಾಂಡೇಶ್ವರ ಎಂಬಲ್ಲಿ ನಡೆದಿದೆ.

ಮೃತರನ್ನು ಸ್ಥಳೀಯ ನಿವಾಸಿ ವಿಶ್ವನಾಥ್ (45) ಎಂದು ಗುರುತಿಸಲಾಗಿದೆ. ಇವರು ಕೆಲಸಕ್ಕೆ ತಮ್ಮ ಬೈಕಿನಲ್ಲಿ ಹೊರಡಲು ಸಿದ್ಧರಾಗಿದ್ದರು. ಈ ವೇಳೆ ಎದೆ ನೋವು ಕಾಣಿಸಿಕೊಂಡ ಪರಿಣಾಮ ಅಲ್ಲೇ ಕುಸಿದು ಬಿದ್ದರೆನ್ನಲಾಗಿದೆ. ತೀವ್ರ ವಾಗಿ ಅಸ್ವಸ್ಥಗೊಂಡ ಇವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News