ರೈತರ ಮಕ್ಕಳಿಗೆ ತೋಟಗಾರಿಕೆ ತರಬೇತಿ: ಅರ್ಜಿ ಆಹ್ವಾನ
Update: 2023-03-17 21:06 IST
ಉಡುಪಿ : ತೋಟಗಾರಿಕೆ ಇಲಾಖೆಯ ವತಿಯಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಯು ಕನಿಷ್ಠ ಎಸೆಸೆಲ್ಸಿ ಉತ್ತೀರ್ಣರಾಗಿದ್ದು, ಕನಿಷ್ಠ ೧೮ ವರ್ಷ ಮೇಲ್ಪಟ್ಟಿರಬೇಕು. ಅಭ್ಯರ್ಥಿಯ ತಂದೆ, ತಾಯಿ ಅಥವಾ ಪೋಷಕರು ಕಡ್ಡಾಯವಾಗಿ ಕೃಷಿ ಜಮೀನು ಹೊಂದಿರಬೇಕು.
ಅರ್ಜಿ ಸಲ್ಲಿಸಲು ಎ.೧೨ ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖೆ - https://horticulturedir.karnataka.gov.in- ವೆಬ್‌ಸೈಟ್, ತೋಟಗಾರಿಕಾ ಉಪ ನಿರ್ದೇಶಕರು ಉಡುಪಿ ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.