ಇಮ್ರಾನ್ ಖಾನ್ ಬಂಧನ ವಾರಾಂಟ್ ಅಮಾನತು

Update: 2023-03-17 17:09 GMT

ಇಸ್ಲಮಾಬಾದ್, ಮಾ.17: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ಖಾನ್ ವಿರುದ್ಧದ ಬಂಧನ ವಾರಾಂಟ್ ಅನ್ನು ಇಸ್ಲಮಾಬಾದ್ ಹೈಕೋರ್ಟ್ ಅಮಾನತುಗೊಳಿಸಿದೆ ಎಂದು ನ್ಯಾಯಾಲಯದ ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.

ಇದರಿಂದ ನ್ಯಾಯಾಲಯಕ್ಕೆ ಹಾಜರಾಗಲು ಇಮ್ರಾನ್ ಖಾನ್ ಗೆ ಅನುವು ಮಾಡಿಕೊಟ್ಟಂತಾಗಿದೆ. ಇಮ್ರಾನ್ಖಾನ್ ಶನಿವಾರ ನ್ಯಾಯಾಲಯದಲ್ಲಿ ಹಾಜರಾಗಲಿದ್ದಾರೆ ಎಂದು ಅವರ ವಕೀಲರು ಹೇಳಿದ್ದಾರೆ.ತೋಷಖಾನಾ ಪ್ರಕರಣದಲ್ಲಿ ಇಮ್ರಾನ್ ವಿರುದ್ಧ ಪಾಕಿಸ್ತಾನದ ಚುನಾವಣಾ ಆಯೋಗ ಇಸ್ಲಮಾಬಾದ್ ಹೈಕೋರ್ಟ್ನಲ್ಲಿ ಪ್ರಕರಣ ದಾಖಲಿಸಿತ್ತು. ಆದರೆ ಹಲವು ಬಾರಿ ನೋಟಿಸ್ ನೀಡಿದ್ದರೂ ಇಮ್ರಾನ್ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಅವರ ವಿರುದ್ಧ ಜಾಮೀನುರಹಿತ ಬಂಧನ ವಾರಂಟ್ ಜಾರಿಯಾಗಿತ್ತು.

ಇಮ್ರಾನ್ರನ್ನು ಬಂಧಿಸಲು ಲಾಹೋರ್ ಪೊಲೀಸರು  ಮಂಗಳವಾರ ಅವರ ನಿವಾಸಕ್ಕೆ ತೆರಳಿದಾಗ ಇಮ್ರಾನ್ ಬೆಂಬಲಿಗರು ಪ್ರತಿಭಟನೆ ನಡೆಸಿ ತಡೆಯೊಡ್ಡಿದ್ದರು. 

Similar News