ಸಾರಿಗೆ ನೌಕರರಿಗೆ ಶೇ.15ರಷ್ಟು ವೇತನ ಹೆಚ್ಚಿಸಿ ಆದೇಶ ಹೊರಡಿಸಿದ ಸರಕಾರ

Update: 2023-03-17 17:16 GMT

ಬೆಂಗಳೂರು: ಸಾರಿಗೆ ನೌಕರರ ಮೂಲ ವೇತನಕ್ಕೆ ಶೇ.15ರಷ್ಟು ವೇತನ ಹೆಚ್ಚಳಗೊಳಿಸಿ ರಾಜ್ಯ ಸರಕಾರ ಶುಕ್ರವಾರ ಅಧಿಕೃತ ಆದೇಶ ಹೊರಡಿಸಿದೆ.

ವೇತನ ಹೆಚ್ಚಳ ಮಾಡುವಂತೆ ಆಗ್ರಹಿಸಿ ಸಾರಿಗೆ ನೌಕರರು ಮಾ.21ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದರು. ಈ ಹಿನ್ನಲೆಯಲ್ಲಿ ಎಚ್ಚೆತ್ತ ರಾಜ್ಯ ಸರಕಾರ ನೌಕರರ ಸಂಘದ ಜತೆ ಸರಣಿ ಮಾತುಕತೆಗಳನ್ನು ನಡೆಸಿ ಕೊನೆಗೂ ವೇತನ ಹೆಚ್ಚಳ ಮಾಡಿದೆ. ನೌಕರರ ಬೇಡಿಕೆ ಹಿನ್ನೆಲೆಯಲ್ಲಿ ಶೇ.10ರಷ್ಟು ವೇತನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಶ್ರೀರಾಮುಲು ಭರವಸೆ ಕೊಟ್ಟಿದ್ದರು. ಆದರೆ, ಇದಕ್ಕೆ ಸಾರಿಗೆ ನೌಕರರು ಒಪ್ಪಿಗೆ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಸರಕಾರವು ರಸ್ತೆ ಸಾರಿಗೆ ನಿಗಮಗಳ ಅಧಿನಿಯಮ 1950ರ ಸೆಕ್ಷನ್ 34(1)ರ ಅನ್ವಯ ಸಾರಿಗೆ ನೌಕರರಿಗೆ ಶೇ.15ರಷ್ಟು ವೇತನ ಏರಿಕೆ ಮಾಡಲಾಗಿದೆ.

ಕೆಎಸ್ಸಾರ್ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮ ಅಧಿಕಾರಿ ಮತ್ತು ನೌಕರರು 2019ರ ಡಿಸೆಂಬರ್ 31ರಂದು ಪಡೆಯುತ್ತಿದ್ದ ಮೂಲ ವೇತನವನ್ನು ಶೇ.15ರಷ್ಟು ಹೆಚ್ಚಿಸಿ, ಅದರಂತೆ ವೇತನ ಶ್ರೇಣಿಗಳನ್ನು ಪರಿಷ್ಕರಿಸಲು ಆದೇಶ ಹೊರಡಿಸಿದ್ದು, ನಾಲ್ಕು ರಸ್ತೆ ಸಾರಿಗೆ ನಿಗಮಗಳ ಪುನಶ್ಚೇತನಕ್ಕಾಗಿ ರಚಿಸಿರುವ ಏಕಸದಸ್ಯ ಸಮಿತಿಯು ತಿಂಗಳ ಕಾಲಮಿತಿಯೊಳಗೆ ಶಿಫಾರಸ್ಸು ಮಾಡಲು ಸೂಚಿಸಲಾಗಿದೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ: ಮಹಿಳೆಯೋರ್ವರು ಅಳುತ್ತಿದ್ದರೂ ನಿರ್ಲಕ್ಷಿಸಿ ತೆರಳಿದ ಸಿಎಂ ಬೊಮ್ಮಾಯಿ: ಕಾಂಗ್ರೆಸ್ ಆರೋಪ

Similar News