ಮಾ.20ರಂದು 'ಯತೀಂ' ಕಾದಂಬರಿ ಬಿಡುಗಡೆ
ಮಂಗಳೂರು, ಮಾ.18: ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯದ ಬಲ್ಮಠದಲ್ಲಿರುವ ಯೆನೆಪೋಯ ಇನ್‌ಸ್ಟಿಟ್ಯೂಟ್ ಆಫ್ ಆರ್ಟ್ಸ್, ಸೈಯನ್ಸ್, ಕಾಮರ್ಸ್ ಮತ್ತು ಮ್ಯಾನೇಜ್‌ಮೆಂಟ್‌ನ ಭಾಷಾ ವಿಭಾಗದ ಸಹಾಯಕ ಪ್ರಾಧ್ಯಾಪಕ ನಿಯಾಝ್ ಪಡೀಲ್ ಕೃತಿ ಯತೀಂ ಕಾದಂಬರಿ ಬಿಡುಗಡೆ ಸಮಾರಂಭ ಮತ್ತು ಉಪನ್ಯಾಸ ಕಾರ್ಯಕ್ರಮ ಮಾ.20ರಂದು ಮಧ್ಯಾಹ್ನ 2:15ಕ್ಕೆ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ದಿನಕರ ಪಚ್ಚನಾಡಿ ತಿಳಿಸಿದ್ದಾರೆ.
ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯೆನೆಪೋಯ ವಿಶ್ವ ವಿದ್ಯಾನಿಲಯದ ಸಹಕುಲಪತಿ ಡಾ.ಬಿ.ಎಚ್.ಶ್ರೀಪತಿ ರಾವ್ ಅವರು ಕೃತಿ ಬಿಡುಗಡೆ ಮಾಡಲಿದ್ದಾರೆ ಎಂದರು.
ಪ್ರಾಂಶುಪಾಲ ಡಾ.ಅರುಣ್ ಭಾಗವತ್ ಅಧ್ಯಕ್ಷತೆ ವಹಿಸಲಿದ್ದು, ಲೇಖಕ ಡಾ.ನರೇಂದ್ರ ರೈ ದೇರ್ಲ ಅವರು ಉಪನ್ಯಾಸ ನೀಡಲಿದ್ದಾರೆ. ಮಂಗಳೂರು ವಿವಿ ಬ್ಯಾರಿ ಅಧ್ಯಯನ ಪೀಠದ ಸಂಯೋಜಕ ಡಾ. ಅಬೂಬಕರ್ ಸಿದ್ದಿಕ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಹಾಸ್ಪಿಟಾಲಿಟಿ ಸೈಯನ್ಸ್ ಮುಖ್ಯಸ್ಥ ಮರ್ವಿನ್ ಜೈಸನ್ ವಾಸ್, ಕೃತಿಕಾರ ನಿಯಾಝ್ ಪಡೀಲ್, ಉಪನ್ಯಾಸಕ ಮೋಹಿತ್ ಎಸ್, ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಪವಿತ್ರ ಶೆಟ್ಟಿ ಉಪಸ್ಥಿತರಿದ್ದರು.