ಭಾರತ್ ಜೋಡೊ ಯಾತ್ರೆ ವೇಳೆ ನೀಡಿದ್ದ ಹೇಳಿಕೆ ಬಗ್ಗೆ ವಿವರ ಪಡೆಯಲು ರಾಹುಲ್ ಗಾಂಧಿ ನಿವಾಸಕ್ಕೆ ದಿಲ್ಲಿ ಪೊಲೀಸ್

Update: 2023-03-19 06:05 GMT

ಹೊಸದಿಲ್ಲಿ: ಪ್ಯಾನ್-ಇಂಡಿಯಾ ಪಾದಯಾತ್ರೆ 'ಭಾರತ್ ಜೋಡೊ ಯಾತ್ರೆ' ವೇಳೆ ರಾಹುಲ್ ಗಾಂಧಿ ನೀಡಿರುವ  "ಮಹಿಳೆಯರ ಮೇಲೆ ಇನ್ನೂ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ" ಎಂಬ ಹೇಳಿಕೆಗೆ ಸಂಬಂಧಿಸಿದಂತೆ ವಿವರ ಪಡೆಯಲು ದಿಲ್ಲಿ ಪೊಲೀಸ್‌ನ ಉನ್ನತ ಅಧಿಕಾರಿಗಳು ರವಿವಾರ  ಅವರ ನಿವಾಸವನ್ನು ತಲುಪಿದ್ದಾರೆ.

 ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ ತಮ್ಮನ್ನು ಸಂಪರ್ಕಿಸಿರುವ ಮಹಿಳೆಯರ ಕುರಿತ ವಿವರಗಳನ್ನು ಕೋರಿ ದಿಲ್ಲಿ ಪೊಲೀಸರು ಮಾರ್ಚ್ 16 ರಂದು ಕಾಂಗ್ರೆಸ್ ನಾಯಕನಿಗೆ ನೋಟಿಸ್ ನೀಡಿದ್ದರು.

ಸೋಷಿಯಲ್ ಮೀಡಿಯಾ ಪೋಸ್ಟ್‌ಗಳನ್ನು ಗಮನದಲ್ಲಿಟ್ಟುಕೊಂಡು ಪೊಲೀಸರು ರಾಹುಲ್ ಗಾಂಧಿಗೆ ಪ್ರಶ್ನಾವಳಿಯನ್ನು ಕಳುಹಿಸಿದ್ದರು. ಇದಕ್ಕೆ ಗಾಂಧಿ ಇನ್ನೂ ಪ್ರತಿಕ್ರಿಯಿಸಿಲ್ಲ.

ಭಾರತ್ ಜೋಡೊ ಯಾತ್ರೆಯ ವೇಳೆ ಜನವರಿ 30 ರಂದು ಶ್ರೀನಗರದಲ್ಲಿ,"ಮಹಿಳೆಯರು ಈಗಲೂ ಲೈಂಗಿಕ ದೌರ್ಜನ್ಯಕ್ಕೊಳಗಾಗುತ್ತಿದ್ದಾರೆ ಎಂದು ನಾನು ಕೇಳಿದ್ದೇನೆ" ಎಂದು ರಾಹುಲ್ ಹೇಳಿಕೆ ನೀಡಿದ್ದರು  ಪೊಲೀಸರು ಹೇಳಿದ್ದಾರೆ.

ದಿಲ್ಲಿ ಪೊಲೀಸರು ಆ ಮಹಿಳೆಯರ ವಿವರಗಳನ್ನು ರಾಹುಲ್ ಗಾಂಧಿಯಿಂದ ತಿಳಿದುಕೊಳ್ಳಲು ಬಯಸುತ್ತಾರೆ. ಉನ್ನತ ಪೊಲೀಸ್ ಅಧಿಕಾರಿಗಳು, ವಿಶೇಷ ಪೊಲೀಸ್ ಕಮಿಷನರ್ ಮಟ್ಟದ ಅಧಿಕಾರಿಯೊಂದಿಗೆ, ಸಂಬಂಧಪಟ್ಟ ಮಹಿಳೆಯರ ಬಗ್ಗೆ ಮಾಹಿತಿ ಪಡೆಯಲು ರಾಹುಲ್  ಗಾಂಧಿ ಅವರೊಂದಿಗೆ ಮಾತನಾಡಲು ಪ್ರಯತ್ನಿಸುತ್ತಾರೆ.

ಈ ಕ್ರಮವು ದುರುದ್ದೇಶಪೂರಿತ: ಕಾಂಗ್ರೆಸ್

ಸ್ವಯಂ ಪ್ರೇರಿತವಾಗಿ ಅಥವಾ ದೂರಿನ ಆಧಾರದ ಮೇಲೆ ರಾಹುಲ್ ಗಾಂಧಿ ವಿರುದ್ಧ ನೋಟಿಸ್ ನೀಡುವುದಕ್ಕೆ ಯಾವುದೇ ಕಾನೂನು ಪೂರ್ವನಿದರ್ಶನವಿಲ್ಲ. ಇದು ದಿಲ್ಲಿ ಪೊಲೀಸರಿಂದ ನಿಯೋಜಿಸಲಾದ ಕಿರುಕುಳದ ಮತ್ತೊಂದು ಸಾಧನವಾಗಿದೆ. ಒಂದು ಹೇಳಿಕೆ ಇರಬಹುದು, ಆದರೆ ಬಲಿಪಶುಗಳ ಹೆಸರನ್ನು ಬಹಿರಂಗಪಡಿಸಲು ರಾಹುಲ್ ರನ್ನು ಒತ್ತಾಯಿಸಲು ಸಾಧ್ಯವಿಲ್ಲ. ಈ ಕ್ರಮವು ದುರುದ್ದೇಶಪೂರಿತ ಹಾಗೂ  ನಕಲಿಯಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ..

Similar News