×
Ad

ಮಧ್ಯಪ್ರದೇಶ: ಉರುಳಿಬಿದ್ದ ಬಸ್, ಕನಿಷ್ಠ 25 ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

Update: 2023-03-19 12:56 IST

ಉಜ್ಜಯಿನಿ,( ಮಧ್ಯಪ್ರದೇಶ): ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯಲ್ಲಿ ಗುಜರಾತ್‌ಗೆ ತೆರಳುತ್ತಿದ್ದ ಬಸ್  ಸ್ಕಿಡ್ ಆಗಿ 8 ಅಡಿ ಆಳಕ್ಕೆ ಬಿದ್ದು ಪಲ್ಟಿಯಾದ ಪರಿಣಾಮ ಕನಿಷ್ಠ 25 ಮಂದಿ ಗಾಯಗೊಂಡಿದ್ದು, ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ರವಿವಾರ ತಿಳಿಸಿದ್ದಾರೆ.

ಶನಿವಾರ ತಡರಾತ್ರಿ ಈ ಅವಘಡ ಸಂಭವಿಸಿದೆ ಎಂದರು.

"ಇಂಧೋರ್‌ನಿಂದ ರಾಜ್‌ಕೋಟ್‌ಗೆ ತೆರಳುತ್ತಿದ್ದ ಬಸ್ ಉಜ್ಜಯಿನಿಯಿಂದ ಪ್ರಯಾಣಿಕರನ್ನು ಕೂರಿಸಿಕೊಂಡು ಭೂಕಿ ಮಾತಾ ಬೈಪಾಸ್‌ನಲ್ಲಿ ಉರುಳಿ ಬಿದ್ದ ಕಾರಣ ಸುಮಾರು 25 ಪ್ರಯಾಣಿಕರು ಗಾಯಗೊಂಡಿದ್ದಾರೆ, ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ" ಎಂದು ಜಿಲ್ಲಾಧಿಕಾರಿ ಕುಮಾರ್ ಪುರಶೋತ್ತಮ್ ಫೋನ್‌ನಲ್ಲಿ ಪಿಟಿಐಗೆ ತಿಳಿಸಿದರು.

ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಉಜ್ಜಯಿನಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಬಲಿಪಶುಗಳಲ್ಲಿ ಹೆಚ್ಚಿನವರು ಉಜ್ಜಯಿನಿಯ ಪ್ರಸಿದ್ಧ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಸ್ ಚಾಲಕನ ವಿರುದ್ಧ ನಾವು ಅಜಾಗರೂಕ ಚಾಲನೆಯ ಪ್ರಕರಣವನ್ನು ದಾಖಲಿಸಿದ್ದೇವೆ, ”ಎಂದು ಪೊಲೀಸ್ ಅಧಿಕಾರಿ ಓಂ ಪ್ರಕಾಶ್ ಮಿಶ್ರಾ ಹೇಳಿದರು

Similar News