ದಾನಿಶ್ ಎಜುಕೇಷನಲ್ ಟ್ರಸ್ಟ್ ವತಿಯಿಂದ 1.20 ಕೋಟಿ ರೂ.ವಿದ್ಯಾರ್ಥಿವೇತನ ವಿತರಣೆ

Update: 2023-03-19 14:02 GMT

ಬೆಂಗಳೂರು, ಮಾ.19: ದಾನಿಶ್ ಎಜುಕೇಷನಲ್ ಟ್ರಸ್ಟ್ ವತಿಯಿಂದ 2022-23ನೆ ಸಾಲಿನಲ್ಲಿ ವೃತ್ತಿಪರ ಶಿಕ್ಷಣ ಪಡೆಯುತ್ತಿರುವ ರಾಜ್ಯದ 503 ಬಡ ವಿದ್ಯಾರ್ಥಿಗಳಿಗೆ 1,20,85000 ರೂ.(ಒಂದು ಕೋಟಿ ಇಪ್ಪತ್ತು ಲಕ್ಷ ಎಂಬತ್ತೈದು ಸಾವಿರ)ಗಳ ವಿದ್ಯಾರ್ಥಿವೇತನವನ್ನು ವಿತರಿಸಲಾಯಿತು.

ರವಿವಾರ ನಗರದ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿನ ಡೈಮಂಡ್ ಡಿಸ್ಟ್ರಿಕ್ಟ್ನಲ್ಲಿರುವ ಇಂಡಿಯಾ ಬಿಲ್ರ‍್ಸ್ ಕಾರ್ಪೋರೇಷನ್ ಕ್ಲಬ್ ಹೌಸ್‌ನಲ್ಲಿ ದಾನಿಶ್ ಎಜುಕೇಷನಲ್ ಟ್ರಸ್ಟ್ ಅಧ್ಯಕ್ಷೆ ಹುಸ್ಮಾ ಶರೀಫ್ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನದ ಚೆಕ್‌ಗಳನ್ನು ವಿತರಿಸಿದರು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ವಿದ್ಯಾರ್ಥಿಗಳ ಪೈಕಿ 503 ಮಂದಿಯನ್ನು ವಿದ್ಯಾರ್ಥಿವೇತನಕ್ಕಾಗಿ ಆಯ್ಕೆ ಮಾಡಲಾಗಿತ್ತು.

ಎಂಜಿನಿಯರಿಂಗ್ ಹಾಗೂ ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಷ್ಟೆ ಅಲ್ಲ, ಕಾನೂನು, ಪತ್ರಿಕೋದ್ಯಮ, ಫಾರ್ಮಸಿ, ನರ್ಸಿಂಗ್, ಫಿಸಿಯೋಥೆರಪಿ, ಪಶು ವಿಜ್ಞಾನ, ಕೃಷಿ ವಿಜ್ಞಾನ ಸೇರಿದಂತೆ ಇನ್ನಿತರ ಕೋರ್ಸುಗಳನ್ನು ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ವಿದ್ಯಾರ್ಥಿವೇತನ ನೀಡಲಾಯಿತು.

2023-24ನೆ ಸಾಲಿನಲ್ಲಿ ವಿದ್ಯಾರ್ಥಿವೇತನದ ಮೊತ್ತವನ್ನು 1.50 ಕೋಟಿ ರೂ.ಗಳಿಗೆ ಹೆಚ್ಚಿಸಿ, ಸುಮಾರು 650ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ನೆರವು ಒದಗಿಸುವುದಾಗಿ ಹುಸ್ನಾ ಶರೀಫ್ ಪ್ರಕಟಿಸಿದರು. ಕಾರ್ಯಕ್ರಮದಲ್ಲಿ ಸಿಗ್ಮಾ ಫೌಂಡೇಶನ್ ಮುಖ್ಯಸ್ಥ ಅಮೀನ್ ಮುದಸ್ಸರ್ ಹಾಗೂ ಸಾಮಾಜಿಕ ಕಾರ್ಯಕರ್ತ ತನ್ವೀರ್ ಅಹ್ಮದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Similar News