×
Ad

ಕೊಡ್ಲಿಪೇಟೆ: 7ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

Update: 2023-03-19 20:13 IST

ಮಡಿಕೇರಿ ಮಾ.19 : ಏಳನೇ ತರಗತಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶನಿವಾರಸಂತೆಯ ಕೊಡ್ಲಿಪೇಟೆ ಸಮೀಪದ ಶಿವರಳ್ಳಿ ಗ್ರಾಮದಲ್ಲಿ ವರದಿಯಾಗಿದೆ.

ಖಾಸಗಿ ಬಸ್ ಚಾಲಕ ಜಿತೇಂದ್ರ ಹಾಗೂ ಅಕ್ಷತಾ ದಂಪತಿಯ ಪುತ್ರಿ ವೈಷ್ಣವಿ (12) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ. 

ಈಕೆ ಸೋಮವಾರಪೇಟೆಯ ಖಾಸಗಿ ಶಾಲೆಯಲ್ಲಿ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ನೇಣಿಗೆ ಶರಣಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. 

Similar News