ಹರ್ಷ ಮಂದರ್ ಅವರ ಎನ್‌ಜಿಒ ವಿರುದ್ಧ ಸಿಬಿಐ ವಿಚಾರಣೆಗೆ ಕೇಂದ್ರ ಶಿಫಾರಸು

Update: 2023-03-20 13:40 GMT

ಹೊಸದಿಲ್ಲಿ: ವಿದೇಶಿ ದೇಣಿಗೆ (ನಿಯಂತ್ರಣ) ಕಾಯ್ದೆಯ ಉಲ್ಲಂಘನೆ ಆರೋಪದ ಮೇಲೆ ಲೇಖಕ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತ ಹರ್ಷ ಮಂದರ್ (Harsh Mander) ಸ್ಥಾಪಿಸಿದ ಎನ್‌ಜಿಒ ಅಮನ್ ಬಿರಾದಾರಿ ವಿರುದ್ಧ ಗೃಹ ಸಚಿವಾಲಯ (MHA) ಸಿಬಿಐ ತನಿಖೆಗೆ ಶಿಫಾರಸು ಮಾಡಿದೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಹಿಂದಿನ ಯುಪಿಎ ಸರ್ಕಾರದ ಅವಧಿಯಲ್ಲಿ ಸೋನಿಯಾ ಗಾಂಧಿ ನೇತೃತ್ವದ ರಾಷ್ಟ್ರೀಯ ಸಲಹಾ ಮಂಡಳಿಯ ಸದಸ್ಯರಾಗಿದ್ದ ಹರ್ಷ್ ಮಂದರ್ ಅವರು ಅಮನ್ ಬಿರಾದಾರಿಯನ್ನು ಸ್ಥಾಪಿಸಿದ್ದರು.

ವಿದೇಶಿ ದೇಣಿಗೆ (ನಿಯಂತ್ರಣ) ಕಾಯ್ದೆಯ ವಿವಿಧ ನಿಬಂಧನೆಗಳ ಉಲ್ಲಂಘನೆಗಾಗಿ ಅಮನ್ ಬಿರಾದಾರಿ ಸಂಸ್ಥೆ ವಿರುದ್ಧ ಸಿಬಿಐ ತನಿಖೆಗೆ ಶಿಫಾರಸು ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: 'ಗೋ ಸೇವಾ ಆಯೋಗ' ಸ್ಥಾಪಿಸುವ ಪ್ರಸ್ತಾವನೆಗೆ ಮಹಾರಾಷ್ಟ್ರ ಸಚಿವ ಸಂಪುಟ ಒಪ್ಪಿಗೆ

Similar News