ಸಣ್ಣ ವಯಸ್ಸಿನವರಿಗೆ ವೃದ್ಧಾಪ್ಯ ವೇತನ ಮಾಡಿಕೊಡುತ್ತಿದ್ದ ವ್ಯಕ್ತಿ ಸಿಸಿಬಿ ಬಲೆಗೆ

Update: 2023-03-20 14:25 GMT

ಬೆಂಗಳೂರು, ಮಾ.20: ಅನರ್ಹರಿಗೆ ಸರಕಾರದ ಯೋಜನೆಯಡಿ ವೃದ್ಧಾಪ್ಯ ವೇತನ ಫಲಾನುಭವಿಯನ್ನಾಗಿ ಮಾಡಿಸಿಕೊಡುತ್ತಿದ್ದ ಮಧ್ಯವರ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. 

ಚತುರ್ ಎಂಬಾತನನ್ನು ಬಂಧಿಸಲಾಗಿದ್ದು, ಬೆಂಗಳೂರಿನ ಮೂರು ಕಡೆಗಳಲ್ಲಿ ಪರಿಶೀಲನೆ ನಡೆಸಿದ ಸಿಸಿಬಿ ಪೊಲೀಸರು ಇನ್ನೂರಕ್ಕೂ ಹೆಚ್ಚು ಜನ ನಕಲಿ ವೃದ್ಧಾಪ್ಯ ವೇತನ ಪಡೆಯುತ್ತಿರುವುದನ್ನು ಪತ್ತೆ ಹಚ್ಚಿದ್ದಾರೆ. 

ವೃದ್ಧಾಪ್ಯ ವೇತನ ಪಡೆಯಲು ಮುಖ್ಯವಾಗಿ 60 ವರ್ಷ ವಯಸ್ಸಾಗಿರಬೇಕು. ಬಡತನ ರೇಖೆಗಿಂತ ಕೆಳಗಿರುವ ವೃದ್ಧರು ಮಾತ್ರ ಈ ಯೋಜನೆಗೆ ಅರ್ಹರು. ಇದಲ್ಲದೆ ಯೋಜನೆಯ ಲಾಭ ಪಡೆಯಲು ಆದಾಯ ಪ್ರಮಾಣ ಪತ್ರ ಹಾಗೂ ಆಧಾರ್ ಕಾರ್ಡ್ ಕಡ್ಡಾಯ. ಆದರೆ ಆಧಾರ್ ಕಾರ್ಡ್ ಅನ್ನು ತಿದ್ದುಪಡಿ ಮಾಡುತ್ತಿದ್ದ ಆರೋಪಿ 60 ವರ್ಷವಯಸ್ಸಿನಂತೆ ಆಧಾರ್ ಕಾರ್ಡ್ ಮಾಡಿ, ಸರಕಾರದ ವೆಬ್‍ಸೈಟ್‍ಗೆ ದಾಖಲಾತಿಗಳನ್ನು ಕಳುಹಿಸಿ ಯೋಜನೆ ಲಾಭಪಡೆಯವಂತೆ ಮಾಡುತ್ತಿದ್ದ ಎನ್ನುವ ಮಾಹಿತಿ ವಿಚಾರಣೆಯಲ್ಲಿ ಗೊತ್ತಾಗಿದೆ ಎಂದು ಸಿಸಿಬಿ ಜಂಟಿ ಆಯುಕ್ತ ಎಸ್.ಡಿ.ಶರಣಪ್ಪ ತಿಳಿಸಿದ್ದಾರೆ.

Similar News