ಪಿಯುಸಿ ಪರೀಕ್ಷೆ: ಸೋಮವಾರ 25 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಗೈರು, ಓರ್ವ ಡಿಬಾರ್

Update: 2023-03-20 14:37 GMT

ಬೆಂಗಳೂರು, ಮಾ.20: ದ್ವಿತೀಯ ಪಿಯುಸಿ ಪರೀಕ್ಷೆಯ ಇತಿಹಾಸ ಹಾಗೂ ಭೌತಶಾಸ್ತ್ರ ವಿಷಯಗಳ ಪರೀಕ್ಷೆಗಳು ಸೋಮವಾರದಂದು ನಡೆದಿದ್ದು, 25,908 ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಗೈರು ಹಾಜರಾಗಿದ್ದಾರೆ. ರಾಮನಗರ ಜಿಲ್ಲೆಯಲ್ಲಿ ಒಬ್ಬರು ಪರೀಕ್ಷೆಯಿಂದ ಡಿಬಾರ್ ಆಗಿದ್ದಾರೆ. 

5,42,733 ಅಭ್ಯರ್ಥಿಗಳು ಪರೀಕ್ಷೆಗಳಿಗೆ ನೋಂದಣಿ ಮಾಡಿಕೊಂಡಿದ್ದರು. ಅದರಲ್ಲಿ ಸುಮಾರು 5,16,825 ಅಭ್ಯರ್ಥಿಗಳು ಪರೀಕ್ಷೆಯನ್ನು ಬರೆದಿದ್ದಾರೆ ಎಂದು ಶಿಕ್ಷಣ ಇಲಾಖೆಯು ಮಾಹಿತಿ ನೀಡಿದೆ. 

Similar News