ಲಿಂಗತ್ವ ಅಲ್ಪಸಂಖ್ಯಾತ, ದಮನಿತ ಮಹಿಳೆಯರ ಸಮುದಾಯ ಸಂಗಮ

Update: 2023-03-20 15:48 GMT

ಉಡುಪಿ : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ನಗರ ಹಾಗೂ ಗ್ರಾಮೀಣ ಅಭಿವೃದ್ಧಿಗಾಗಿ ಸಮೂಹ ಸಂಸ್ಥೆ (ಗಾರ್ಡ್), ಆಶ್ರಯ ಸಮುದಾಯ ಸಂಘಟನೆ, ಲಯನ್ಸ್ ಕ್ಲಬ್ ಲಕ್ಷ್ಯ ಉಡುಪಿ ಹಾಗೂ ಲಯನ್ಸ್ ಕ್ಲಬ್ ಬನ್ನಂಜೆ ಇವರ ಸಂಯುಕ್ತ ಆಶ್ರಯದಲ್ಲಿ ಲಿಂಗತ್ವ ಅಲ್ಪಸಂಖ್ಯಾತ ಮತ್ತು ದಮನಿತ ಮಹಿಳೆಯರ ಸಮುದಾಯ ಸಂಗಮ ಕಾರ್ಯಕ್ರಮ ಮಾರ್ಚ್ 21ರಂದು ಬೆಳಗ್ಗೆ 10.30ಕ್ಕೆ ನಗರದ ಬ್ರಹ್ಮಗಿರಿ ಬಾಲಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಉದ್ಘಾಟಿಸಲಿದ್ದು, ಜಿಪಂನ ಮುಖ್ಯ ಕಾರ್ಯನಿರ್ವಹಣಾಧಿ ಕಾರಿ ಪ್ರಸನ್ನ ಹೆಚ್ ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೃಷ್ಣಪ್ಪ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ ವಿವೇಕಾನಂದ, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಚಿದಾನಂದ ಸಂಜು, ಲಯನ್ಸ್ ಕ್ಲಬ್ ಲಕ್ಷ್ಯ ಉಡುಪಿಯ ಅಧ್ಯಕ್ಷ ರಮೇಶ್ ಕೆ ಶೆಟ್ಟಿ, ಬನ್ನಂಜೆ ಲಯನ್ಸ್ ಕ್ಲಬ್ ಅಧ್ಯಕ್ಷೆ ವಸಂತಿ ಕಿದಿಯೂರು, ಮೈಸೂರು ನಗರ ಹಾಗೂ ಗ್ರಾಮೀಣ ಅಭಿವೃದ್ಧಿಗಾಗಿ ಸಮೂಹ (ಗಾರ್ಡ್) ಸಂಸ್ಥೆಯ ಸಲಹೆಗಾರ ಡಾ.ದಿವಾಕರ್ ಕಾರ್ಯಕ್ರಮ ದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Similar News