ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬಿಜೆಪಿಯ ಬಾಬುರಾವ್ ಚಿಂಚನಸೂರ್ ರಾಜೀನಾಮೆ

Update: 2023-03-20 17:07 GMT

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬಿಜೆಪಿಯ ಬಾಬುರಾವ್ ಚಿಂಚನಸೂರ್ ಸೋಮವಾರ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.

ಬಾಬುರಾವ್ ಚಿಂಚನಸೂರ್ ಅವರು ಕಲಬುರಗಿ ಜಿಲ್ಲೆ ಗುರುಮಿಠಕಲ್ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಆದರೆ, ಪರಿಷತ್ ಸದಸ್ಯರಾಗಿರುವ ಕಾರಣ ಟಿಕೆಟ್ ನೀಡಲಾಗದು ಎಂದು ಬಿಜೆಪಿ ನಾಯಕರು ತಿಳಿಸಿದ್ದರು. ಹೀಗಾಗಿ ಪರಿಷತ್ ಸದಸ್ಯ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿದ್ದಾರೆ. ಜತೆಗೆ, ಬಿಜೆಪಿ ಪಕ್ಷಕ್ಕೂ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ

ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಸೇರಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಲು ಶ್ರಮಿಸಿದ್ದರು. ಬಿಜೆಪಿ ಸರಕಾರದಲ್ಲಿ 'ನಿಜ ಶರಣ ಅಂಬಿಗರ ಚೌಡಯ್ಯ ನಿಗಮ'ದ ಅಧ್ಯಕ್ಷರೂ ಆಗಿದ್ದರು.

 ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಇದೀಗ ನಾಲ್ಕು ವರ್ಷಗಳ ಬಳಿಕ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲು ಮುಂದಾಗಿರುವ ಬಾಬುರಾವ್ ಚಿಂಚನಸೂರ್ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಗುರಮಿಟ್ಕಲ್ ಕ್ಷೇತ್ರದ ಟಿಕೆಟ್ ಆಕಾಂಕ್ಷೆ ಯಾಗಿದ್ದಾರೆ ಎಂದು ಹೇಳಲಾಗಿದೆ.

Similar News