ಜನರಿಗೆ ಮೋಸ ಮಾಡಿ ಮತ ಕಸಿಯುವ ಕೆಲಸವನ್ನು ಬಿಜೆಪಿ ಮಾಡುವುದಿಲ್ಲ: ಸಚಿವ ಡಾ.ಕೆ.ಸುಧಾಕರ್

Update: 2023-03-20 17:03 GMT

ಬೆಂಗಳೂರು, ಮಾ.20: ಸುಳ್ಳು ಭರವಸೆಗಳಿಂದ ಜನರನ್ನು ವಂಚಿಸಿ, ಮತ ಕಸಿಯುವ ಕೆಲಸವನ್ನು ಬಿಜೆಪಿ ಮಾಡುವುದಿಲ್ಲ. ಜನರ ಸಲಹೆಗಳನ್ನು ಸ್ವೀಕರಿಸಿಯೇ ಅವರಿಗೆ ನೆರವಾಗುವ ಪ್ರಣಾಳಿಕೆಯನ್ನು ಬಿಜೆಪಿ ರೂಪಿಸಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಸೋಮವಾರ ಬೆಂಗಳೂರಿನ ಖಾಸಗಿ ಹೊಟೇಲ್‍ನಲ್ಲಿ ಬಿಜೆಪಿ ಪ್ರಣಾಳಿಕೆ ವಿಶೇಷ ಸಂವಾದ ನಡೆಯಿತು. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ. ಮನ್‍ಸುಖ್ ಮಾಂಡವೀಯ, ಖ್ಯಾತ ವೈದ್ಯರು, ವೈದ್ಯ ವಿದ್ಯಾರ್ಥಿಗಳು, ರೈತ ಮುಖಂಡರು, ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಪ್ರತಿನಿಧಿಗಳು ಈ ಸಂವಾದದಲ್ಲಿ ಪಾಲ್ಗೊಂಡು ಹಲವು ಸಲಹೆಗಳನ್ನು ನೀಡಿದರು.

ಸಚಿವ ಡಾ.ಕೆ.ಸುಧಾಕರ್ ಮಾತನಾಡಿ, ಬಿಜೆಪಿ ಪ್ರಣಾಳಿಕೆ ನೈಜತೆಯಿಂದ ಕೂಡಿರಲಿದೆ. ಮತ ಕಸಿಯಲು ಅಥವಾ ಸುಳ್ಳು ಹೇಳಲು ಬಿಜೆಪಿ ತಯಾರಿಲ್ಲ. ಬಿಜೆಪಿಗೆ ಪ್ರಣಾಳಿಕೆಯು ಪವಿತ್ರವಾದುದು. 50-60 ಕ್ಷೇತ್ರಗಳ ಜನರ ಜೊತೆ ಸಭೆ, ಸಮಾಲೋಚನೆ ಮಾಡಿ, ಸಲಹೆ ಪಡೆದು, ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಿದ್ದೇವೆ. ಪ್ರತಿಯೊಬ್ಬರ ಆಲೋಚನೆ, ಕನಸುಗಳಿಗೂ ಇಲ್ಲಿ ಜಾಗವಿದೆ ಎಂದರು.

ಈ ವೇಳೆ ಮಾತನಾಡಿದ ಕೇಂದ್ರ ಸಚಿವ ಮನ್‍ಸುಖ್ ಮಾಂಡವೀಯ, ಬಿಜೆಪಿ ಪ್ರಣಾಳಿಕೆಯಲ್ಲಿ ವಾಸ್ತವ ಮಾತ್ರ ಇರುತ್ತದೆ. ಜನಸಾಮಾನ್ಯರಿಗೆ ಏನು ಬೇಕು ಎಂಬುದಕ್ಕೆ ಮಾತ್ರ ಮಹತ್ವವಿರಲಿದೆ. ಕಾಂಗ್ರೆಸ್‍ನಂತೆ ಘೋಷಣೆಗೆ ಸೀಮಿತವಾಗುವ ಭರವಸೆಗಳನ್ನು ನೀಡುವುದಿಲ್ಲ ಎಂದರು.

Similar News