ಫಲಾಹ್ ವಿದ್ಯಾ ಸಂಸ್ಥೆಯ ಯುಕೆಜಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Update: 2023-03-20 17:59 GMT

ಮಂಗಳೂರು : ತಲಪಾಡಿ ಕೆ.ಸಿ ರೋಡ್ ಫಲಾಹ್ ವಿದ್ಯಾಸಂಸ್ಥೆಯ ಕಿಂಡರ್ ಗಾರ್ಟನ್ ವಿಭಾಗದ ಯು.ಕೆ.ಜಿ ಪುಟಾಣಿ ವಿದ್ಯಾರ್ಥಿಗಳ ಪದವಿ ಪ್ರದಾನ ಸಮಾರಂಭ ಮಾ.18ರಂದು ನಡೆಯಿತು.

ಯೆನೆಪೋಯ ಮೆಡಿಕಲ್ ಕಾಲೇಜಿನ ಮನೋವೈದ್ಯಶಾಸ್ತ್ರ ವಿಭಾಗದ ಅಸೋಸಿಯೇಟ್ ಪ್ರೊ.ಡಾ.ರಾಜೇಶ್ ಎಂ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಫಲಾಹ್ ಎಜುಕೇಶನ್ ಸೊಸೈಟಿಯ ಅಧ್ಯಕ್ಷ ಹಾಜಿ ಯು.ಬಿ.ಮೊಹಮ್ಮದ್ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಸಂಸ್ಥೆಯ ಪ್ರಾಂಶುಪಾಲ ಅಬ್ದುಲ್ ಖಾದರ್ ಹುಸೈನ್ ಪಡುಬಿದ್ರಿ, ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯ ತಲಪಾಡಿ ಇಸ್ಮಾಯಿಲ್, ಕೋಶಾಧಿಕಾರಿ ಹಾಜಿ ಕೆ.ಎಂ.ಅಬ್ಬಾಸ್ ಮಜಲ್, ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಆಯಿಷಾ ಸಬೀನಾ ಕೈಸಿರಾನ್, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ವಿದ್ಯಾ ವಿ ಡಿಸೋಜ ಉಪಸ್ಥಿತರಿದ್ದರು.

ಯುಕೆಜಿ ವಿಭಾಗದ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರವನ್ನು ವಿತರಿಸಲಾಯಿತು. ಶಿಕ್ಷಕಿ ಶ್ವೇತಾ ಸ್ವಾಗತಿಸಿ ದರು. ಮಾ.ಜಲಾಲ್ ವಂದಿಸಿದರು. ಮಶ್ವತ್ ಕಾರ್ಯಕ್ರಮ ನಿರೂಪಿಸಿದರು.

Similar News