ಆ್ಯಂಬುಲೆನ್ಸ್ ಢಿಕ್ಕಿ: ಪಾದಚಾರಿಗಳಿಬ್ಬರು ಮೃತ್ಯು

Update: 2023-03-21 15:17 GMT

ಬೆಂಗಳೂರು, ಮಾ. 21: ಪಾದಚಾರಿಗಳಿಗೆ ಆ್ಯಂಬುಲೆನ್ಸ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಜಾಲ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೈಸೂರಿನ ಪ್ರಕಾಶ್ ಹಾಗೂ ಬನಶಂಕರಿ ಮೂಲದ ನಾಗೇಂದ್ರ ಮೃತ ದುದೈರ್ವಿಗಳು ಎಂದು ಪೊಲೀಸರು ಗುರುತಿಸಿದ್ದಾರೆ.

ಮಂಗಳವಾರ ಚಿಕ್ಕಜಾಲ ಬಳಿಯ ತರಳುಬಾಳು ರಸ್ತೆಯಲ್ಲಿ ಈ ದುರ್ಘಟನೆ ನಡೆದಿದೆ. ಇಬ್ಬರು ನಡೆದುಕೊಂಡು ಹೋಗುವಾಗ ವೇಗವಾಗಿ ಬಂದ ಆ್ಯಂಬುಲೆನ್ಸ್ ವಾಹನ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತ ತೀವ್ರತೆಗೆ  ಪ್ರಕಾಶ್ ಸ್ಥಳದಲ್ಲಿ ಮೃತಪಟ್ಟರೆ, ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಆನಂತರ, ಅಪಘಾತವೆಸಗಿದ ಆಂಬುಲೆನ್ಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ವಾಹನವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಆ್ಯಂಬುಲೆನ್ಸ್ ನಲ್ಲಿ ರೋಗಿ ಇಲ್ಲದಿದ್ದರೂ ವೇಗವಾಗಿ ಚಾಲನೆ ಮಾಡಿದ ಚಾಲಕ, ಇಬ್ಬರ ಸಾವಿಗೆ ಕಾರಣನಾಗಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News