ಜನರಿಗೆ ಮೋಸ ಮಾಡಲು 'ಗ್ಯಾರಂಟಿ ಕಾರ್ಡ್' ಹಂಚುತ್ತಿರುವ ಕಾಂಗ್ರೆಸ್: ಶೋಭಾ ಕರಂದ್ಲಾಜೆ

Update: 2023-03-21 17:40 GMT

ಬೆಂಗಳೂರು, ಮಾ. 21: ಕಾಂಗ್ರೆಸ್ ಜನರನ್ನು ಮರುಳು ಮಾಡಲು, ಮೋಸ ಮಾಡಲು ಗ್ಯಾರಂಟಿ ಕಾರ್ಡ್ ಹಂಚುತ್ತಿದ್ದಾರೆ ಎಂದು ಕೆಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.

ಮಂಗಳವಾರ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ನೀವು 2013ರಿಂದ 2018ರ ವರೆಗೆ ಅಧಿಕಾರ ನಡೆಸಿದ್ದೀರಿ. ಆಗ ನೀವು ಒಂದು ಸಮುದಾಯದ ಓಲೈಕೆಗಾಗಿ ಮಾತ್ರ ಯೋಜನೆ ಕೊಟ್ಟಿದ್ದೀರಲ್ಲವೇ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ಸಿನ ಸುಳ್ಳು ಭರವಸೆ ನಂಬಲು ಕರ್ನಾಟಕದ ಜನರು ಮೂರ್ಖರಲ್ಲ. ಕರ್ನಾಟಕದ ಜನರು ವಿದ್ಯಾವಂತರು, ಪ್ರಜ್ಞಾವಂತರು, ಬುದ್ಧಿವಂತರು. ಅವರೆಲ್ಲರೂ ಮಾಧ್ಯಮ ನೋಡುತ್ತಾರೆ. ಯಾವ ರಾಜ್ಯದಲ್ಲಿ ನೀವು ಮೋಸ ಮಾಡಿದ್ದೀರೆಂಬ ಅರಿವು ಅವರಿಗೆ ಇದೆ ಎಂದು ತಿಳಿಸಿದರು.

2001ರ ಗ್ಯಾರಂಟಿ ಕಾರ್ಡ್, 2013ರ ಗ್ಯಾರಂಟಿ ಕಾರ್ಡ್ ಏನಾಗಿದೆ ಎಂದು ಜನತೆ ಪ್ರಶ್ನಿಸಬೇಕು ಎಂದು ಅವರು ಮನವಿ ಮಾಡಿದರು.

Similar News