ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್:‌ 100 ಕ್ಕೂ ಅಧಿಕ ಎಫ್‌ಐಆರ್‌, 6 ಮಂದಿಯನ್ನು ಬಂಧಿಸಿದ ದಿಲ್ಲಿ ಪೊಲೀಸ್

Update: 2023-03-22 06:00 GMT

ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯಾದ್ಯಂತ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟರ್‌ ಗಳನ್ನು ಹಾಕಿರುವ ಕುರಿತಂತೆ 100 ಕ್ಕೂ ಹೆಚ್ಚು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದ್ದು, ಆರು ಮಂದಿಯನ್ನು ಬಂಧಿಸಲಾಗಿದೆ.

ದಿಲ್ಲಿಯ ಹಲವೆಡೆ "ಮೋದಿ ಹಠಾವೋ ದೇಶ್ ಬಚಾವೋ" ಎಂಬ ಶೀರ್ಷಿಕೆಯ ಪೋಸ್ಟರ್‌ಗಳನ್ನು ಅಂಟಿಸಲಾಗಿದೆ.

ನಗರದಾದ್ಯಂತ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟರ್‌ಗಳನ್ನು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಲ್ಲಿ ಪೊಲೀಸರು 100 ಕ್ಕೂ ಹೆಚ್ಚು ಎಫ್‌ಐಆರ್‌ಗಳನ್ನು ದಾಖಲಿಸಿದ್ದು, ಆರು ಜನರನ್ನು ಬಂಧಿಸಲಾಗಿದೆ ಎಂದು ವಿಶೇಷ ಸಿಪಿ ದೀಪೇಂದ್ರ ಪಾಠಕ್ ಎಎನ್‌ಐಗೆ ತಿಳಿಸಿದ್ದಾರೆ.

ಅದಾಗ್ಯೂ, ಪೋಸ್ಟರ್‌ಗಳಲ್ಲಿ ಪ್ರಿಂಟಿಂಗ್ ಪ್ರೆಸ್ ಅಥವಾ ಪ್ರಕಾಶಕರ ಬಗ್ಗೆ ಯಾವುದೇ ಉಲ್ಲೇಖವಿಲ್ಲ ಎಂದು ವರದಿಗಳು ಹೇಳಿವೆ. ದಿಲ್ಲಿ ಪೊಲೀಸರು ಈ ಬಗ್ಗೆ ಕ್ರಮ ಕೈಗೊಂಡಿದ್ದು, ತನಿಖೆ ಆರಂಭಿಸಿದ್ದಾರೆ.

ಪ್ರಿಂಟಿಂಗ್ ಪ್ರೆಸ್ ಆ್ಯಕ್ಟ್ ಮತ್ತು ಆಸ್ತಿ ವಿರೂಪ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ನಗರದಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Similar News