ಇವತ್ತು ಆಗಲ್ಲ, 2-3 ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಡಿ.ಕೆ ಶಿವಕುಮಾರ್

Update: 2023-03-22 06:49 GMT

ಬೆಂಗಳೂರು:  ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿ 2-3 ದಿನಗಳಲ್ಲಿ ಬಿಡುಗಡೆಯಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಇಂದು (ಬುಧವಾರ) ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿ ಬಿಡುಗಡೆಯಾಗಬೇಕಿತ್ತು. ಆದರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಯುಗಾದಿ ನಿಮಿತ್ತ ಬೆಂಗಳೂರಿಗೆ ಆಗಮಸಿದ್ದಾರೆ. ಆದ್ದರಿಂದ ಇನ್ನೂ 2-3 ದಿನಗಳಲ್ಲಿ ಪಟ್ಟಿ ಬಿಡುಗಡೆಯಾಗಲಿದೆ' ಎಂದು ತಿಳಿಸಿದರು.  

'ಯುಗಾದಿ ಹಬ್ಬದ ದಿನದಂದು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬುಧವಾರ ಪ್ರಕಟಿಸಲಾಗುವುದು' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮಂಗಳವಾರ ಹೇಳಿದ್ದರು. 

ಇದನ್ನೂ ಓದಿ: ಚುನಾವಣೆಯ ಕಾಲವಿದು ಎಚ್ಚರ..!: 'ಉರಿಗೌಡ, ನಂಜೇಗೌಡ' ಬಗ್ಗೆ ನಟ ಕಿಶೋರ್ ಎಚ್ಚರಿಕೆಯ ಸಂದೇಶ

Similar News