ಮೂರನೇ ಏಕದಿನ: ಭಾರತ ವಿರುದ್ಧ 21 ರನ್‌ ಗಳ ಗೆಲುವಿನ ಮೂಲಕ ಸರಣಿ ಕೈವಶಪಡಿಸಿಕೊಂಡ ಆಸ್ಟ್ರೇಲಿಯ

Update: 2023-03-22 17:21 GMT

ಚೆನ್ನೈ: ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಭಾರತ ವಿರುದ್ಧ  21 ರನ್ ಗಳ ಜಯದ ಮೂಲಕ ಆಸ್ಟ್ರೇಲಿಯಾ ಸರಣಿ ಕೈವಶಪಡಿಸಿಕೊಂಡಿದೆ. ಸ್ಟೀವ್‌ ಸ್ಮಿತ್‌ ನಾಯಕತ್ವದ ಆಸ್ಟ್ರೇಲಿಯಾ ತಂಡವು 2-1 ಅಂತರದಲ್ಲಿ ಸರಣಿ ಗೆದ್ದುಕೊಂಡಿದೆ.  

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ 49 ಓವರ್‌ಗಳಲ್ಲಿ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡು ಭಾರತಕ್ಕೆ 270 ರನ್‌ ಗುರಿ ನೀಡಿತ್ತು. ನಂತರ ಗುರಿ ಬೆನ್ನಟ್ಟಿದ ಭಾರತ ವಿರಾಟ್ ಕೊಹ್ಲಿ (54) ಅರ್ಧಶತಕದ ಹೊರತಾಗಿಯೂ  248 ರನ್‌ಗಳಿಗೆ ಆಲೌಟ್ ಆಗಿ ಪಂದ್ಯ ಗೆಲ್ಲಲು ವಿಫಲವಾಯಿತು.

ನಾಯಕ ರೋಹಿತ್ ಶರ್ಮಾ 30, ಶುಭಮನ್ ಗಿಲ್ 37, ಕೆ.ಎಲ್. ರಾಹುಲ್ 32 ರನ್ ಗಳಿಸಿದರು. ಸೂರ್ಯಕುಮಾರ್ ಯಾದವ್ ಸತತ ಮೂರನೇ ಬಾರಿ ಶೂನ್ಯಕ್ಕೆ ಔಟಾಗಿ ಮತ್ತೆ ನಿರಾಶೆ ಮೂಡಿಸಿದರು.

ಸರಣಿಯ ಕೊನೆಯ ಪಂದ್ಯದಲ್ಲಿ ಸೋಲಿನ ಮೂಲಕ ಭಾರತ ತವರಿನಲ್ಲೇ ಸರಣಿ ಸೋತು ಮುಖಭಂಗಕ್ಕೊಳಗಾಗಿದೆ.  ಏಕದಿನ ರ್ಯಾಕಿಂಗ್ ನಲ್ಲಿ ಮೊದಲ ಸ್ಥಾನದಲ್ಲಿದ್ದ ಭಾರತ ದ್ವಿತೀಯ ಸ್ಥಾನಕ್ಕೆ ಕುಸಿದಿದ್ದು, ಆಸ್ಟ್ರೇಲಿಯ ಮತ್ತೆ ಮೊದಲ ಸ್ಥಾನಕ್ಕೆ ಜಿಗಿದಿದೆ.

Similar News