ಹಾಸನ: ಜೈನ ಮಠದ ಪೀಠಾಧ್ಯಕ್ಷ ಚಾರುಕೀರ್ತಿ ಭಟ್ಟಾಕರ ಸ್ವಾಮೀಜಿ ನಿಧನ

Update: 2023-03-23 05:54 GMT

ಹಾಸನ, ಮಾ.23: ಶ್ರವಣಬೆಳಗೊಳ  ಜೈನ ಮಠದ ಪೀಠಾಧ್ಯಕ್ಷ ಚಾರುಕೀರ್ತಿ ಭಟ್ಟಾಕರ ಸ್ವಾಮೀಜಿ ಗುರುವಾರ ನಿಧನರಾಗಿದ್ದಾರೆ.

ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಬೆಳ್ಳೂರು ಕ್ರಾಸ್ ನಲ್ಲಿರುವ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು (ಮಾ.23)  ನಿಧನರಾಗಿದ್ದಾರೆ.

ಕೆಲ ತಿಂಗಳಿಂದ ಸ್ವಾಮೀಜಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಇಂದು ಮುಂಜಾನೆ ದಿಡೀರ್ ಅರೋಗ್ಯ ಸ್ಥಿತಿಯಲ್ಲಿ ಏರು ಪೇರಾಗಿದೆ. ಕೂಡಲೇ ಶ್ರವಣಬೆಳಗೊಳದ ಜೈನ ಮಠಕ್ಕೆ ವೈದ್ಯರು ಆಗಮಿಸಿ ಪರೀಕ್ಷೆ ನಡೆಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆ ಅಗತ್ಯ ಇರುವ ಕಾರಣಕ್ಕೆ ಶ್ರೀ ಆದಿಚುಂಚನಗಿರಿ ಆಸ್ಪತ್ರೆಗೆ ಸ್ವಾಮೀಜಿಯವರನ್ನ ಸ್ಥಳಾಂತರ ಮಾಡಲಾಗಿತ್ತು. 

ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು 1949ರ ಮೇ 3 ರಂದು ಜನಿಸಿದ್ದರು. ಮೂಲತಃ  ಕಾರ್ಕಳದ ವರಂಗ ಗ್ರಾಮದವರು. 1970 ರಲ್ಲಿ ಜೈನ ಮಠದ ಪೀಠವೇರಿದ್ದ ಶ್ರೀಗಳು, ಇತಿಹಾಸ ತಜ್ಞ, ತತ್ವಜ್ಞಾನಿ, ಇತಿಹಾಸ, ಕನ್ನಡ, ಸಂಸ್ಕೃತ ದಲ್ಲಿ ಸ್ನಾತಕೋತ್ತರ ಪದವಿ ಜೊತೆಗೆ ಪ್ರಾಕೃತ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 1981ರ ಮಹಾಮಸ್ತಕಾಭಿಷೇಕ ಯಶಸ್ವಿಯಾಗಿ ನೆರವೇರಿಸಿದ್ದಕ್ಕೆ ಅಂದಿನ ಪ್ರಧಾನಿ ಇಂದಿರಾಗಾಂಧಿಯವರು ಇವರಿಗೆ ಕರ್ಮಯೋಗಿ ಎಂದು ಬಿರುದು ನೀಡಿದ್ದರು.

Similar News