ಪಿ.ಎ ಕಾಲೇಜಿನಲ್ಲಿ ಘನತ್ಯಾಜ್ಯ ವಿಲೇವಾರಿ ಕುರಿತು ಮಾಹಿತಿ ಕಾರ್ಯಾಗಾರ

Update: 2023-03-23 05:50 GMT

ಕೊಣಾಜೆ: ಪಿ.ಎ ಪ್ರಥಮ ದರ್ಜೆ ಕಾಲೇಜಿನ ಐ.ಕ್ಯೂ.ಎ.ಸಿ, ಎನ್.ಎಸ್.ಎಸ್  ಘಟಕದ ಸಹಯೋಗದೊಂದಿಗೆ ಅಡುಗೆ ಮನೆಯ ಘನತ್ಯಾಜ್ಯವನ್ನು ಕಾಂಪೋಸ್ಟ್‌ ಮಾಡುವ ಬಗ್ಗೆ ಒಂದು ದಿನದ  ಕಾರ್ಯಾಗಾರ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಪಿ.ಎ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ  ಸಿ.ವಿ ಪೂಜಾರ್ ಅವರು ಮಾತನಾಡಿದರು. ಕ್ಯಾಂಪಸ್ ಸುಪರ್ವೈಸರ್ ಕ್ಯಾಪ್ಟನ್‌ ರುದ್ರೇಶ್.‌ ಎನ್ ಕಾರ್ಯಕ್ರಮದ ಉಪಯೋಗದ ಬಗ್ಗೆ ಮಾಹಿತಿ ನೀಡಿದರು.

ಪಿ.ಎ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಸರ್ಫಾಜ್‌ ಜೆ. ಹಾಸಿಂ ಸ್ವಾಗತಿಸಿ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು.
ಕಾಲೇಜಿನ ವಿವಿಧ ವಿಭಾಗಗಳ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Similar News