ಕಲಬುರಗಿ: ಮೇಯರ್, ಉಪ ಮೇಯರ್ ಸ್ಥಾನ ಬಿಜೆಪಿ ತೆಕ್ಕೆಗೆ

Update: 2023-03-23 12:57 GMT

ಕಲಬುರಗಿ,ಮಾ.23: ತೀವ್ರ ಕುತೂಹಲ ಕೆರಳಿಸಿದ್ದ ಕಲಬುರಗಿ ಮಹಾನಗರ ಪಾಲಿಕೆ ಮೇಯರ್ ಮತ್ತು ಉಪ ಮೇಯರ್ ಚುನಾವಣೆಯಲ್ಲಿ ಮೊದಲ ಬಾರಿ ಸ್ವತಂತ್ರವಾಗಿ ಬಿಜೆಪಿ ತನ್ನದಾಗಿಸಿಕೊಳ್ಳುವ ಮೂಲಕ ಪಾಲಿಕೆ ಗದ್ದುಗೆ ಏರಿದೆ.

ಕಾಂಗ್ರೆಸ್ ಮತ್ತು ಜೆಡಿಎಸ್ ಸಂಖ್ಯೆ ಬಲ 32 ಪಡೆದರೆ ಬಿಜೆಪಿ ಸ್ವತಂತ್ರವಾಗಿ 33 ಮತಗಳು ಪಡೆಯುವ ಮೂಲಕ ಪಾಲಿಕೆ ಗದ್ದುಗೆ ಏರಿದ್ದು, ಕಲಬುರಗಿ ಮಹಾನಗರ ಪಾಲಿಕೆ ಮೇಯರ್ ಆಗಿ ವಿಶಾಲ್ ದರ್ಗಿ, ಉಪ ಮೇಯರ್ ಆಗಿ ಶಿವಾನಂದ ಪಿಸ್ತಿ ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್ ನ ರಾಜ್ಯ ಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಮತ್ತು ಜೆಡಿಎಸ್ ಪಾಲಿಕೆ ಸದಸ್ಯ ಅಲೀಮ್ ಪಟೇಲ್ ಮತ ಕೇಂದ್ರಕ್ಕೆ ಬಾರದೇ ದೂರು ಉಳಿದರು. ಬಿಜೆಪಿ ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಸಹ ಮತದಾನಕ್ಕೆ ಗೈರು ಹಾಜರಾದರು.

ಪಾಲಿಕೆಗೆ ಆಯ್ಕೆಯಾದ ಸದಸ್ಯರು, ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು ಹಾಗೂ ರಾಜ್ಯ ಸಭಾ ಸದಸ್ಯರು ಸೇರಿ ಒಟ್ಟು 65 ಮತದಾನದ ಅವಕಾಶವಿತ್ತು. 

2021ರ ಸೆಪ್ಟೆಂಬರ್ ತಿಂಗಳಲ್ಲಿ ಕಲಬುರಗಿ ಪಾಲಿಕೆ ಚುನಾವಣೆ ನಡೆದಿತ್ತು. ಬಿಜೆಪಿ 23, ಕಾಂಗ್ರೆಸ್ 27, ಜೆಡಿಎಸ್ 4, ಓರ್ವ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದರು. 

Similar News