ಕೋಟ್ಪಾದಳದಿಂದ ದಾಳಿ: ದಂಡ ವಸೂಲಿ

Update: 2023-03-23 16:07 GMT

ಉಡುಪಿ, ಮಾ.23: ಜಿಲ್ಲೆಯಲ್ಲಿ ಕೋಟ್ಪಾ ಕಾಯ್ದೆಯನ್ನು ಅನುಷ್ಠಾನ ಗೊಳಿಸುವ ನಿಟ್ಟಿನಲ್ಲಿ ತಾಲೂಕು ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ನಗರದ ಬೀಡಿನಗುಡ್ಡೆ, ಚಿಟ್ಪಾಡಿ ಹಾಗೂ ಬನ್ನಂಜೆ ವ್ಯಾಪ್ತಿಯ ತಂಬಾಕು ಮಾರಾಟದ ಅಂಗಡಿ, ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್‌ಗಳ ಮೇಲೆ ದಾಳಿ ನಡೆಸಿ, 36 ಪ್ರಕರಣಗಳನ್ನು ದಾಖಲಿಸಿ, 6,400ರೂ. ದಂಡ ವಸೂಲಿ ಮಾಡಲಾಯಿತು.

ಈ ಸಂದರ್ಭದಲ್ಲಿ ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದೇವಪ್ಪ ಪಟಗಾರ್, ತಾಲೂಕು ಶಿಕ್ಷಣಾ ಇಲಾಖೆಯ ಗೋಪಾಲ ಶೆಟ್ಟಿ, ಕಾರ್ಮಿಕ ನಿರೀಕ್ಷಕ ವಿಜೇಂದ್ರ ಕೆ, ಸರ್ವೇಕ್ಷಣಾಧಿಕಾರಿ ಕಚೇರಿಯ ಶೈಲಾ ಶ್ಯಾಮನೂರು ಮತ್ತಿತರರು ಉಪಸ್ಥಿತರಿದ್ದರು.

Similar News