ಕೇಂದ್ರೀಯ ಸಂಸ್ಥೆಗಳನ್ನು ಸರಕಾರ ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿ ಸುಪ್ರೀಂ ಕೋರ್ಟ್‌ ಮೊರೆ ಹೋದ ವಿಪಕ್ಷಗಳು

Update: 2023-03-24 06:37 GMT

ಹೊಸದಿಲ್ಲಿ: ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಸರಕಾರ ದುರುಪಯೋಗ ಪಡಿಸಿಕೊಂಡಿದೆ ಎಂದು ಆರೋಪಿಸಿ 14 ವಿರೋಧ ಪಕ್ಷಗಳು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿವೆ ಎಂದು NDTV ವರದಿ ಮಾಡಿದೆ.

ಎಪ್ರಿಲ್ 5 ರಂದು ಸುಪ್ರೀಂ ಕೋರ್ಟ್  ಮೊಕದ್ದಮೆಯ ವಿಚಾರಣೆ ನಡೆಸಲಿದೆ.

ಕೇಂದ್ರೀಯ ತನಿಖಾ ದಳ (ಸಿಬಿಐ) ಹಾಗೂ  ಜಾರಿ ನಿರ್ದೇಶನಾಲಯ (ಈಡಿ) ದಂತಹ ಸಂಸ್ಥೆಗಳು ಬಿಜೆಪಿಯ ವಿರೋಧಿಗಳನ್ನು ಮಾತ್ರ ಗುರಿಯಾಗಿಸಿಕೊಂಡಿವೆ. ವಿರೋಧ ಪಕ್ಷದಲ್ಲಿದ್ದವರು  ಬಿಜೆಪಿಗೆ ಸೇರಿದ ನಂತರ ಆ ನಾಯಕರ ಮೇಲಿನ ಪ್ರಕರಣಗಳನ್ನು ಆಗಾಗ್ಗೆ ಕೈಬಿಡಲಾಗುತ್ತದೆ ಅಥವಾ ಸಮಾಧಿ ಮಾಡಲಾಗುತ್ತದೆ ಎಂದು ವಿಪಕ್ಷಗಳು ತಿಳಿಸಿವೆ.

ಈ ಆರೋಪಗಳನ್ನು ಬಿಜೆಪಿ ನಿರಾಕರಿಸಿದ್ದು, ಸಂಸ್ಥೆಗಳು ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತವೆ ಎಂದು ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ನ್ಯಾಯಾಧೀಶರು ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರ ಸಲ್ಲಿಕೆಯನ್ನು ಗಮನಿಸಿದರು, ಎರಡು ವಾರಗಳಲ್ಲಿ ಪ್ರಕರಣವನ್ನು ಪಟ್ಟಿ ಮಾಡಿದರು.

ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಆಮ್ ಆದ್ಮಿ ಪಕ್ಷ,ಸಂಯುಕ್ತ ಜನತಾ ದಳ,  ಭಾರತ್ ರಾಷ್ಟ್ರ ಸಮಿತಿ, ರಾಷ್ಟ್ರೀಯ ಜನತಾ ದಳ, ಸಮಾಜವಾದಿ ಪಕ್ಷ, ಶಿವಸೇನೆ (ಉದ್ಧವ್ ಠಾಕ್ರೆ ಬಣ), ನ್ಯಾಷನಲ್ ಕಾನ್ಫರೆನ್ಸ್, ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ,   ಎಡಪಕ್ಷಗಳು  ಹಾಗೂ  ಡಿಎಂಕೆ ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿವೆ.

Similar News