ಬಿಎಸ್ ವೈ ನಿವಾಸಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ

Update: 2023-03-24 06:02 GMT

ಬೆಂಗಳೂರು, ಮಾ.24: ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಶುಕ್ರವಾರ ಬೆಂಗಳೂರಿಗೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿ ಉಪಹಾರ ಸೇವಿಸಿದರು. 

ನಗರದ ಕುಮಾರಕೃಪಾ ರಸ್ತೆಯಲ್ಲಿರುವ ತನ್ನ ಕಾವೇರಿ ನಿವಾಸಕ್ಕೆ ಭೇಟಿ ನೀಡಿದ ಅಮಿತ್ ಶಾ ಅವರನ್ನು ಬಿ.ಎಸ್​ ಯಡಿಯೂರಪ್ಪ ಹಾಗೂ ಅವರ ಪುತ್ರ ಬಿ.ವೈ ವಿಜಯೇಂದ್ರ ಹೂ ಗುಚ್ಛ ನೀಡಿ ಸ್ವಾಗತಿಸಿದರು. 

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್​ ಕಟೀಲ್, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹಾಗೂ ಸಚಿವರಾದ ಗೋವಿಂದ ಕಾರಜೋಳ, ಶ್ರೀರಾಮುಲು​​ ಉಪಸ್ಥಿತರಿದ್ದರು. 

Similar News