ಗುಬ್ಬಿ | ಎರಡು ದ್ವಿಚಕ್ರ ವಾಹನಗಳ ಮಧ್ಯೆ ಢಿಕ್ಕಿ: ಇಬ್ಬರು ಸವಾರರು ಮೃತ್ಯು

Update: 2023-03-24 05:50 GMT

ತುಮಕೂರು, ಮಾ.24: ಗುಬ್ಬಿ ಠಾಣಾ ವ್ಯಾಪ್ತಿಯ ಚೇಳೂರು- ಬಿದರೆ ರಸ್ತೆಯ ಶ್ರೀ ಸಾಲುಮರದ ತಿಮ್ಮಕ್ಕ ಉದ್ಯಾನವನದ ಬಳಿ ಎರಡು ದ್ವಿಚಕ್ರ ವಾಹನಗಳು ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಮೃತಪಟ್ಟ ಘಟನೆ ಗುರುವಾರ ರಾತ್ರಿ ನಡೆದಿದೆ.

ಮೃತರನ್ನು ರಾಗಿಮುದ್ದನಹಳ್ಳಿ ನಿವಾಸಿ ಚೆಲುವರಾಜು(45) ಮತ್ತು ಅಭಿಷೇಕ್ ಎಂದು ಗುರುತಿಸಲಾಗಿದೆ.

ಕಳೆದ ರಾತ್ರಿ 8:30ರ ಸುಮಾರಿಗೆ ಸಾಲುಮರದ ತಿಮ್ಮಕ್ಕ ಉದ್ಯಾನವನದ ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಢಿಕ್ಕಿಯಾಗಿದೆ. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಚೆಲುವರಾಜು ಗುಬ್ಬಿ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇನ್ನೊಂದು ದ್ವಿಚಕ್ರ ವಾಹನ ಸವಾರ ಅಭಿಷೇಕ್ ಬೆಂಗಳೂರಿನ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಕೊನೆಯುಸಿರೆಳೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News