ಮಾನನಷ್ಟ ಮೊಕದ್ದಮೆ: ರೂಪಾ ಮೌದ್ಗಿಲ್‌ಗೆ ಕೋರ್ಟ್ ನಿಂದ ಸಮನ್ಸ್ ಜಾರಿ

Update: 2023-03-24 13:27 GMT

ಬೆಂಗಳೂರು, ಮಾ.24: ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಕೇಸ್‌ಗೆ ಸಂಬಂಧಿಸಿದಂತೆ ನಗರದ 8ನೆ ಎಸಿಎಂಎ ಕೋರ್ಟ್ ಕ್ರಿಮಿನಲ್ ಮಾನನಷ್ಟ ಪ್ರಕರಣ ದಾಖಲಿಸಿಕೊಂಡಿದೆ. ಅಲ್ಲದೆ, ರೂಪಾ ಮೌದ್ಗಿಲ್‌ಗೆ ಸಮನ್ಸ್ ಜಾರಿಗೊಳಿಸಿದೆ. 

ಎ.26ಕ್ಕೆ ಹಾಜರಾಗುವಂತೆ ಮ್ಯಾಜಿಸ್ಟ್ರೇಟ್ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಡಿ.ರೂಪಾ ಮೌದ್ಗಿಲ್ ವಿರುದ್ಧ ರೋಹಿಣಿ ಸಿಂಧೂರಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಈ ವಿಚಾರವಾಗಿ ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು, ರೋಹಿಣಿ ಸಿಂಧೂರಿ ವಿರುದ್ಧ ಅನೇಕ ಆರೋಪಗಳನ್ನು ಮಾಡಿದ್ದರು. 

ಇದರ ಬೆನ್ನಲ್ಲೇ ಡಿ.ರೂಪಾ ವಿರುದ್ಧ ರೋಹಿಣಿ ಸಿಂಧೂರಿ ಪರ ವಕೀಲ ಸಿ.ವಿ.ನಾಗೇಶ್ ಅವರು ಮಾನನಷ್ಟ ಪರಿಹಾರ ಕೋರಿ ಲೀಗಲ್ ನೋಟಿಸ್ ಜಾರಿ ಮಾಡಿದ್ದರು. ಒಂದೋ ಕ್ಷಮೆ ಕೇಳಬೇಕು ಇಲ್ಲದಿದ್ದರೆ ಒಂದು ಕೋಟಿ ರೂ. ಮಾನನಷ್ಟ ಪರಿಹಾರ ನೀಡಬೇಕು ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿತ್ತು.

ಕೆಲವು ದಿನಗಳ ಹಿಂದೇ ರಾಜ್ಯ ಸರಕಾರವು ಈ ಇಬ್ಬರು ಅಧಿಕಾರಿಗಳಿಗೆ ಸರಕಾರ ನೋಟಿಸ್ ನೀಡಿ, ವರ್ಗಾವಣೆ ಕೂಡಾ ಮಾಡಿತ್ತು.

Similar News