×
Ad

ಉಡುಪಿ ಜಿಲ್ಲಾ ಮಟ್ಟದ ನೆರೆಹೊರೆ ಯುವ ಸಂಸತ್ ಕಾರ್ಯಕ್ರಮ

Update: 2023-03-24 19:22 IST

ಉಡುಪಿ, ಮಾ.24: ನೆಹರು ಯುವಕೇಂದ್ರ ಉಡುಪಿ ಇವರ ವತಿ ಯಿಂದ ಜಿಲ್ಲಾ ಮಟ್ಟದ ನೆರೆಹೊರೆ ಯುವ ಸಂಸತ್ ಕಾರ್ಯಾಗಾರವು ಮಾರ್ಚ್ 25ರಂದು ಬೆಳಗ್ಗೆ 9:30ಕ್ಕೆ ನಗರದ ಪಿ.ಪಿ.ಸಿ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಉದ್ಘಾಟಿಸಲಿದ್ದು, ಶಾಸಕ ಕೆ ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಪಂ ಸಿಇಓ ಪ್ರಸನ್ನ ಹೆಚ್, ಜಿಲ್ಲಾ ಪೊಲೀಸ್ ಅಧಿಕ್ಷಕ ಹಾಕೆ ಅಕ್ಷಯ್ ಮಚ್ಚಿಂದ್ರ, ನೆಹರು ಯುವ ಕೇಂದ್ರದ ಪ್ರಾದೇಶಿಕ ನಿರ್ದೇಶಕ ನಟರಾಜ್ ಎಂ.ಎನ್, ಪೂರ್ಣಪ್ರಜ್ಞ ಕಾಲೇಜಿನ ಪ್ರಾಂಶುಪಾಲ ಡಾ.ರಾಘವೇಂದ್ರ ಭಟ್, ಪೂರ್ಣಪ್ರಜ್ಞ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನ ಪ್ರಾಂಶುಪಾಲ ಡಾ.ಭರತ್, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್‌ಕುಮಾರ್ ಶೆಟ್ಟಿ, ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದುಪ್ರಕಟಣೆ ತಿಳಿಸಿದೆ.

Similar News