ತುಳುವಿಗೆ ರಾಜ್ಯಭಾಷೆಯ ಸ್ಥಾನಮಾನ: ಶಾಸಕ ವೇದವ್ಯಾಸ ಕಾಮತ್

Update: 2023-03-24 14:33 GMT

ಮಂಗಳೂರು : ತುಳು ಭಾಷೆಯನ್ನು ಸಂವಿಧಾನದ ೮ನೇ ಪರಿಚ್ಛೇದಕ್ಕೆ ಸೇರಿಸಲು ರಾಜ್ಯ ಸರಕಾರ ಸಾಕಷ್ಟು ಪ್ರಯತ್ನ ನಡೆಸುತ್ತಿದ್ದು, ಮುಂನ ದಿನಗಳಲ್ಲಿ ತುಳು ಭಾಷೆಗೆ ರಾಜ್ಯ ಭಾಷೆಯ ಸ್ಥಾನಮಾನಗಳು ಲಭಿಸಲಿವೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.

ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅನುದಾನದಿಂದ ನಗರದ ತುಳುಭವನದ ಹೆಚ್ಚುವರಿ ಕಾಮಗಾರಿಗಳನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.

ತುಳುವನ್ನು ಸಂವಿಧಾನದ ೮ನೇ ಪರಿಚ್ಛೇದಕ್ಕೆ ಸೇರಿಸಲು ಹಲವಾರು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕಿದೆ. ಅದಕ್ಕೆ ಹಲವು ಹಂತಗಳು ಇವೆ. ಆ ಪ್ರಕ್ರಿಯೆಗಳೆಲ್ಲಾ ಸಾಗುತ್ತಿದೆ ಎಂದರು.

ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮೇಯರ್ ಜಯಾನಂದ ಅಂಚನ್, ಉಪ ಮೇಯರ್ ಪೂರ್ಣಿಮಾ, ಮಹಾನಗರ ಪಾಲಿಕೆಯ ಸದಸ್ಯರಾದ ಸುಧೀರ್, ರಾಧಾಕೃಷ್ಣ ಹಾಗೂತುಳು ಸಾಹಿತ್ಯ ಅಕಾಡಮಿಯ ನಿಕಟಪೂರ್ವ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ ಸ್ವಾಗತಿಸಿದರು. ದಿನೇಶ್ ಸುವರ್ಣಾ ರಾಯಿ ಕಾರ್ಯಕ್ರಮ ನಿರೂಪಿಸಿದರು.

Similar News