ರಾಹುಲ್ ಗಾಂಧಿ ಅನರ್ಹತೆ ಖಂಡಿಸಿ ದೇಶದ ವಿವಿಧೆಡೆ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

Update: 2023-03-25 08:01 GMT

ಹೊಸದಿಲ್ಲಿ:  ಕಾಂಗ್ರೆಸ್ ನಾಯಕ  ರಾಹುಲ್ ಗಾಂಧಿ ಅವರನ್ನು ಸಂಸತ್ತಿನಿಂದ ಅನರ್ಹಗೊಳಿಸಿದ ಹಿನ್ನೆಲೆಯಲ್ಲಿ ಚಂಡೀಗಢ ಯುವ ಕಾಂಗ್ರೆಸ್  ಹೊಸದಿಲ್ಲಿ-ಚಂಡೀಗಢ ಶತಾಬ್ದಿ ರೈಲನ್ನು ಚಂಡೀಗಢ ರೈಲು ನಿಲ್ದಾಣದಲ್ಲಿ ತಡೆದು ಪ್ರತಿಭಟನೆ ನಡೆಸಿದೆ.

ರಾಹುಲ್ ಗಾಂಧಿ ಅವರನ್ನು ಸಂಸತ್ತಿಗೆ ಅನರ್ಹಗೊಳಿಸಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ವಯನಾಡಿನಲ್ಲಿ ಪ್ರತಿಭಟನೆ ನಡೆಸಿದರು. ರಾಹುಲ್ ಗಾಂಧಿ ವಯನಾಡಿನ ಮಾಜಿ ಸಂಸದರಾಗಿದ್ದಾರೆ.

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ

ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಶಿಷ್ಟ ಪ್ರತಿಭಟನೆ ನಡೆಸಿದರು, ಅಲ್ಲಿ ಅವರು ಬಾಯಿಗೆ ಬೀಗ ಹಾಕಿಕೊಂಡು ಕುಳಿತಿರುವುದು ಕಂಡುಬಂತು. ಈ ನಡುವೆ ಕಾಂಗ್ರೆಸ್ ಕಾರ್ಯಕರ್ತರು ಎಐಸಿಸಿ ಕೇಂದ್ರ ಕಚೇರಿಗೆ ಆಗಮಿಸಲಾರಂಭಿಸಿದ್ದಾರೆ.

2019ರ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವುದನ್ನು ವಿರೋಧಿಸಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.

 ಕಪ್ಪು ರಿಬ್ಬನ್‌ ಕಟ್ಟಿಕೊಂಡು  ಪ್ರತಿಭಟನೆ ನಡೆಸಿದ ಎಂವಿಎ ಶಾಸಕರು

ರಾಹುಲ್ ಗಾಂಧಿ ಅವರ ಅನರ್ಹತೆಯ ವಿರುದ್ಧ ಮಹಾರಾಷ್ಟ್ರದ ಎಂವಿಎ ಶಾಸಕರು ಕಪ್ಪು ರಿಬ್ಬನ್‌ ಕಟ್ಟಿಕೊಂಡು  ಪ್ರತಿಭಟನೆ ನಡೆಸಿದರು

ರಾಹುಲ್ ಗಾಂಧಿ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಿರುವುದನ್ನು ವಿರೋಧಿಸಿ ಎಂವಿಎ ಶಾಸಕರು ಮಹಾರಾಷ್ಟ್ರ ವಿಧಾನಸಭೆಯ ಹೊರಗೆ ಮೌನ ಪ್ರತಿಭಟನೆ ನಡೆಸುತ್ತಿದ್ದಾರೆ

 'ಪ್ರಜಾಪ್ರಭುತ್ವದ ಕೊಲೆ' ಎಂಬ ಬರಹವಿರುವ ಭಿತ್ತಿಪತ್ರಗಳನ್ನು ಹಿಡಿದುಕೊಂಡು ಶಾಸಕರು ಕಪ್ಪು ರಿಬ್ಬನ್‌ಗಳೊಂದಿಗೆ ಪ್ರತಿಭಟನೆ ನಡೆಸುತ್ತಿರುವುದು ಕಂಡುಬಂದಿತು.

Similar News