ಉದ್ಯೋಗಕ್ಕಾಗಿ ಭೂ ಹಗರಣ: ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್

Update: 2023-03-25 09:21 GMT

ಹೊಸದಿಲ್ಲಿ: ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಶನಿವಾರ ಇಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಮುಂದೆ ಹಾಜರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಳಗ್ಗೆ 10:30ರ ಸುಮಾರಿಗೆ ಸಿಬಿಐ ಪ್ರಧಾನ ಕಛೇರಿಗೆ ಆಗಮಿಸಿದ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕನನ್ನು ಅಗತ್ಯ ವಿಧಿವಿಧಾನಗಳನ್ನು ಪೂರ್ಣಗೊಳಿಸಿದ ನಂತರ ತನಿಖಾ ತಂಡದ ಬಳಿ  ಕರೆದೊಯ್ಯಲಾಯಿತು.

 ಈ ತಿಂಗಳು ಯಾದವ್ ಅವರನ್ನು ಬಂಧಿಸುವುದಿಲ್ಲ ಎಂದು ಸಿಬಿಐ ಕಳೆದ ವಾರ ದಿಲ್ಲಿ ಹೈಕೋರ್ಟ್‌ಗೆ ಭರವಸೆ ನೀಡಿತ್ತು.

ಈಗ ನಡೆಯುತ್ತಿರುವ ಬಿಹಾರ ಅಸೆಂಬ್ಲಿ ಅಧಿವೇಶನವು ಎಪ್ರಿಲ್ 5 ರಂದು ಮುಕ್ತಾಯಗೊಳ್ಳಲಿರುವುದರಿಂದ ಯಾದವ್ ಫೆಡರಲ್ ಏಜೆನ್ಸಿಗೆ ಹಾಜರಾಗಲು ಸ್ವಲ್ಪ ಸಮಯ ಬೇಕಾಗುತ್ತದೆ. ಮಾರ್ಚ್ 25 ರಂದು ಬೆಳಿಗ್ಗೆ 10:30 ಕ್ಕೆ ದಿಲ್ಲಿಯ ಸಿಬಿಐ ಪ್ರಧಾನ ಕಚೇರಿಯಲ್ಲಿ ತನಿಖಾಧಿಕಾರಿಯ ಮುಂದೆ ಹಾಜರಾಗಲಿದ್ದಾರೆ ಎಂದು ಆರ್‌ಜೆಡಿ ನಾಯಕನ ಪರ ವಕೀಲ ಮಣಿಂದರ್ ಸಿಂಗ್ ಅವರು ನ್ಯಾಯಾಲಯಕ್ಕೆ ತಿಳಿಸಿದ್ದರು.

ಮಾರ್ಚ್ 15 ರಂದುವಿಶೇಷ ಸಿಬಿಐ ನ್ಯಾಯಾಲಯವು ಯಾದವ್ ಅವರ ತಂದೆ ಲಾಲು ಪ್ರಸಾದ್, ತಾಯಿ ರಾಬ್ರಿ ದೇವಿ (ಇಬ್ಬರೂ ಬಿಹಾರದ ಮಾಜಿ ಮುಖ್ಯಮಂತ್ರಿಗಳು) ಸಹೋದರಿ ಮಿಸಾ ಭಾರತಿ ಇತರರಿಗೆ ಉದ್ಯೋಗಕ್ಕಾಗಿ ಭೂ ಹಗರಣದ ಪ್ರಕರಣದಲ್ಲಿ ಜಾಮೀನು ನೀಡಿತ್ತು.

Similar News