ನರೇಂದ್ರ ಮರಸಣಿಗೆ ಪ.ಗೋ. ಪ್ರಶಸ್ತಿ

Update: 2023-03-25 11:27 GMT

ಮಂಗಳೂರು: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಪ.ಗೋ. ಪ್ರಶಸ್ತಿಗೆ ವಿಜಯವಾಣಿ ಹೆಬ್ರಿ ವರದಿಗಾರ ನರೇಂದ್ರ ಮರಸಣಿಗೆ ಆಯ್ಕೆಯಾಗಿದ್ದಾರೆ.

ನರೇಂದ್ರ ಅವರ ವಿಶೇಷ ವರದಿ ‘ಮತ್ತಾವಿಗೆ ಮತ್ಯಾವಾಗ ಸೇತುವೆ'  ಜು.28ರಂದು ವಿಜಯವಾಣಿ ದಿನಪತ್ರಿಕೆಯಲ್ಲಿ ಪ್ರಕಟಗೊಂಡಿತ್ತು.

ಹಿರಿಯ ಪತ್ರಕರ್ತ ಕೇಶವ ಕುಂದರ್, ಪತ್ರಿಕೋದ್ಯಮ ಉಪನ್ಯಾಸಕ ಪ್ರಸಾದ್, ಸಾಹಿತಿ ಜಯಶ್ರೀ  ಅವರನ್ನೊಳಗೊಂಡ ಆಯ್ಕೆ ಸಮಿತಿಯು ವರದಿಯನ್ನು ಪ್ರಶಸ್ತಿಗೆ  ಆಯ್ಕೆ ಮಾಡಿದೆ. ಪ್ರಶಸ್ತಿಯು 10,001 ರೂ. ನಗದು, ಪ್ರಶಸ್ತಿ ಫಲಕ, ಸ್ಮರಣಿಕೆ ಒಳಗೊಂಡಿವೆ.

ಪರಿಚಯ: ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಮರಸಣಿಗೆಯ ನರೇಂದ್ರ ಅವರು ಪತ್ರಿಕೋದ್ಯಮ ಸ್ನಾತಕೋತ್ತರ ಪದವೀಧರ. ಕಳೆದ ಮೂರು ವರ್ಷಗಳಿಂದ  ಹೆಬ್ರಿ ವಿಜಯವಾಣಿ ವರದಿಗಾರ. ಗ್ರಾಮೀಣ ಭಾಗದ ಅನೇಕ ಸಮಸ್ಯೆಗಳನ್ನು  ಪತ್ರಿಕೆ ಮೂಲಕ ಸರಕಾರದ ಗಮನ ಸೆಳೆದಿದ್ದಾರೆ. ಪ್ರಸ್ತುತ ಕೆಎಸ್ ಒಯು ನಿಂದ ಎಂಬಿಎ ಪದವಿ ವ್ಯಾಸಂಗ ಮಾಡುತ್ತಿದ್ದಾರೆ.

ಪ್ರಶಸ್ತಿ ಪ್ರದಾನ ಸಮಾರಂಭ ಮಾ.28ರಂದು ಬೆಳಗ್ಗೆ 11 ಗಂಟೆಗೆ ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ನಡೆಯಲಿದೆ. ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಂಜಪ್ಪ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಹಿರಿಯ ಪತ್ರಕರ್ತ ಶ್ರೀಕರ ಎಲ್. ಭಂಡಾರ್ಕರ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸುವರು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Similar News