ಬಿಲ್ಲವರಿಗೆ ತಲಾ ಮೂರು ಸೀಟು ನೀಡಲು ತಾಲೂಕು ಬಿಲ್ಲವ ಸಂಘ ಆಗ್ರಹ
Update: 2023-03-25 18:18 IST
ಮಂಗಳೂರು: ನಾರಾಯಣ ಗುರು ಅಭಿವೃದ್ಧಿ ನಿಗಮ ಮತ್ತು ಇತರ ಬೇಡಿಕೆ ಈಡೇರಿಸಿದ ರಾಜ್ಯ ಸರಕಾರದ ಕ್ರಮವನ್ನು ಸ್ವಾಗತಿಸಿದ ಮಂಗಳೂರು ತಾಲೂಕು ಬಿಲ್ಲವ ಸಂಘವು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಎರಡು ಪ್ರಮುಖ ರಾಜಕೀಯ ಪಕ್ಷಗಳು ದ.ಕ.ಜಿಲ್ಲೆಯಲ್ಲಿ ತಲಾ ಮೂರು ಕ್ಷೇತ್ರಗಳಲ್ಲಿ ಬಿಲ್ಲವ ಅಭ್ಯರ್ಥಿಗಳ ಸ್ಪರ್ಧೆಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದೆ.
ಸಂಘದ ಅಧ್ಯಕ್ಷ ಜಿತೇಂದ್ರ ಜೆ. ಸುವರ್ಣರ ಅಧ್ಯಕ್ಷತೆಯಲ್ಲಿ ಶುಕ್ರವಾರ ಸಂಘದ ಕಚೇರಿಯಲ್ಲಿ ನಡೆದ ಮಾಸಿಕ ಸಭೆಯಲ್ಲಿ ಬಿಲ್ಲವ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ವಿಚಾರದ ಬಗ್ಗೆ ಸಮುದಾಯಕ್ಕೆ ಮನವರಿಕೆ ಮಾಡಲು ನಿರ್ಣಯಿಸಲಾಯಿತು.