ರಾಜ್‌ಘಾಟ್‌ನಲ್ಲಿ ಇಂದು ದಿನಪೂರ್ತಿ ಸತ್ಯಾಗ್ರಹ ನಡೆಸಲು ಕಾಂಗ್ರೆಸ್‌ಗೆ ಅನುಮತಿ ನಿರಾಕರಿಸಿದ ದಿಲ್ಲಿ ಪೊಲೀಸರು

Update: 2023-03-26 05:05 GMT

ಹೊಸದಿಲ್ಲಿ: ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಿರುವುದನ್ನು ವಿರೋಧಿಸಿ ರವಿವಾರ  ರಾಜ್‌ಘಾಟ್‌ನಲ್ಲಿ ದಿನಪೂರ್ತಿ  ಸತ್ಯಾಗ್ರಹ ನಡೆಸಲು ಕಾಂಗ್ರೆಸ್‌ಗೆ ದಿಲ್ಲಿ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ ಎಂದು Indian Express ವರದಿ ಮಾಡಿದೆ.

ಭಾರತದಾದ್ಯಂತ ಎಲ್ಲಾ ರಾಜ್ಯಗಳು ಹಾಗೂ  ಜಿಲ್ಲಾ ಕೇಂದ್ರಗಳಲ್ಲಿನ ಮಹಾತ್ಮ ಗಾಂಧಿ ಪ್ರತಿಮೆಗಳ ಮುಂದೆ ರವಿವಾರ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಸತ್ಯಾಗ್ರಹ ನಡೆಸಲು ನಿರ್ಧರಿಸಲಾಗಿದೆ.

"ಸಂಸತ್ತಿನಲ್ಲಿ ನಮ್ಮ ಧ್ವನಿಯನ್ನು ಮೌನಗೊಳಿಸಿದ ನಂತರ, ಬಾಪು ಅವರ ಸಮಾಧಿಯಲ್ಲಿ ಶಾಂತಿಯುತ ಸತ್ಯಾಗ್ರಹ ನಡೆಸಲು ಸರಕಾರ ನಮಗೆ ಅವಕಾಶ ನಿರಾಕರಿಸಿದೆ. ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರು ರವಿವಾರ ರಾಜ್‌ಘಾಟ್‌ನಲ್ಲಿ ಸತ್ಯಾಗ್ರಹದಲ್ಲಿ ಕುಳಿತುಕೊಳ್ಳಲು ಯೋಜಿಸಿದ್ದರು'' ಎಂದು ಎಐಸಿಸಿ ಸಂಘಟನೆಯ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಹೇಳಿದ್ದಾರೆ.

ಸಂಚಾರ ನಿರ್ವಹಣೆಯೇ  ಅನುಮತಿ ನಿರಾಕರಿಸಲು ಕಾರಣವೆಂದು ದಿಲ್ಲಿ ಪೊಲೀಸರು ಉಲ್ಲೇಖಿಸಿದ್ದಾರೆ ಹಾಗೂ  ಪ್ರದೇಶದಲ್ಲಿ ಸಿಆರ್‌ಪಿಸಿಯ ಸೆಕ್ಷನ್ 144 ಅನ್ನು ವಿಧಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ವಾದ್ರಾ, ಕೆ.ಸಿ. ವೇಣುಗೋಪಾಲ್ ಹಾಗೂ  ಜೈರಾಮ್ ರಮೇಶ್ ಅವರಂತಹ ಹಿರಿಯ ಕಾಂಗ್ರೆಸ್ ನಾಯಕರು ನಿರ್ಬಂಧಗಳ ನಡುವೆಯೂ ಬೃಹತ್ ಪ್ರತಿಭಟನೆಗಾಗಿ ರಾಜ್ ಘಾಟ್‌ಗೆ ಆಗಮಿಸಿದ್ದಾರೆ.

ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರಿಗೆ ಸೂರತ್ ಕೋರ್ಟ್ ಗುರುವಾರ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನಂತರ ಲೋಕಸಭೆಯಿಂದ ಅವರನ್ನು ಅನರ್ಹಗೊಳಿಸಲಾಯಿತು.

ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದ ರಾಹುಲ್ ಗಾಂಧಿ , ಪ್ರಧಾನಿ "ಹೆದರಿದ್ದಾರೆ" ಹಾಗೂ   ಸಂಸತ್ತಿನಲ್ಲಿ ಕೈಗಾರಿಕೋದ್ಯಮಿ ಗೌತಮ್ ಅದಾನಿ ಬಗ್ಗೆ ನಾನು ಮತ್ತೊಂದು ಭಾಷಣ ಮಾಡಲು ಅವರು ಬಯಸುವುದಿಲ್ಲ ಎಂದು ಹೇಳಿದರು.

Similar News