ಮಂಗಳೂರು: ‘ರಂಗ್‌ ದೇ ಬರ್ಸಾ’ ಕಾರ್ಯಕ್ರಮಕ್ಕೆ ನುಗ್ಗಿ ಸಂಘಪರಿವಾರ ಕಾರ್ಯಕರ್ತರಿಂದ ದಾಂಧಲೆ; ಆರೋಪ

Update: 2023-03-26 12:03 GMT

ಮಂಗಳೂರು. ಮಾ.26: ನಗರದ ಮರೋಳಿ ಎಂಬಲ್ಲಿ ‘ರಂಗ್ ದೇ ಬರ್ಸಾ’ ಹೆಸರಿನಲ್ಲಿ ಆಯೋಜಿಸಲಾಗಿದ್ದ ಹೋಳಿ ಆಚರಣೆ ನಡೆಸುತ್ತಿದ್ದ ಸ್ಥಳಕ್ಕೆ ಇಂದು ಸಂಘಪರಿವಾರದ ಕಾರ್ಯಕರ್ತರು ತೆರಳಿ ದಾಂಧಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಹೋಳಿ ಆಚರಣೆಯ ನಡೆಸಲಾದ ಈ ಕಾರ್ಯಕ್ರಮದ ‘ಡಿಜೆ ಪಾರ್ಟಿ’ ಜೊತೆಗೆ ಯುವಕ ಯುವತಿಯರು ಪರಸ್ಪರ ಬಣ್ಣ ಎರಚಿ ಸಂಭ್ರಮಿಸುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಸಂಘಪರಿವಾರದ ಕಾರ್ಯಕರ್ತರು ದಾಂಧಲೆ ನಡೆಸಿದ್ದಾರೆ ಎನ್ನಲಾಗಿದೆ.

ಅಲ್ಲದೆ ಸ್ಥಳದಲ್ಲಿದ್ದ ಹೋಳಿ ಸಂಭ್ರಮದ ಬ್ಯಾನರ್ ಹರಿದು ಹಾಕಿ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿ ಮಾಡಿದ್ದಾರೆ. ಈ ವೇಳೆ ಕಾರ್ಯಕರ್ತರು ಮತ್ತು ಆಯೋಜಕರ ಮಧ್ಯೆ ಮಾತಿನ ಚಕಮಕಿ ನಡೆದಿದೆ ಎಂದು ಹೇಳಲಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ‘6 ಮಂದಿ ಯುವಕರು ಕಾರ್ಯಕ್ರಮಕ್ಕೆ ಅಡ್ಡಿಪಡಿಸಿರುವ, ಕೆಲವು ಬ್ಯಾನರ್ ಹರಿದು ಹಾಕಿರುವ ಬಗ್ಗೆ ಮಾಹಿತಿ ಲಭಿಸಿದೆ. ಈ ಬಗ್ಗೆ ತನಿಖೆ ನಡೆಸಿ ಪ್ರಕರಣ ದಾಖಲಿಸಲಾಗುವುದು’ ಎಂದು ತಿಳಿಸಿದ್ದಾರೆ.

Full View

Similar News