2ಬಿ ಮೀಸಲಾತಿ ರದ್ದು: ಮಾ.31ರಂದು ಮುಸ್ಲಿಮ್ ಒಕ್ಕೂಟದಿಂದ ಪ್ರತಿಭಟನೆ

Update: 2023-03-26 14:29 GMT

ಮಂಗಳೂರು, ಮಾ.26: ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯದ ಶೈಕ್ಷಣಿಕ ಸವಲತ್ತುಗಳಿಗೆ ಮೀಸಲಿರಿಸಿದ ಶೇ.4ರ ‘2ಬಿ’ಯನ್ನು ರಾಜ್ಯ ಬಿಜೆಪಿ ಸರಕಾರ ರದ್ದುಗೊಳಿಸಿ ಇತರ ಸಮುದಾಯಕ್ಕೆ ನೀಡಿದ ಕ್ರಮದ ವಿರುದ್ಧ ಮಾ.31ರಂದು ನಗರದ ಮಿನಿ ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಯಲಿದೆ ಎಂದು ಒಕ್ಕೂಟದ ಅಧ್ಯಕ್ಷ, ಮಾಜಿ ಮೇಯರ್ ಕೆ. ಅಶ್ರಫ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಸಂವಿಧಾನ ಬದ್ಧವಾಗಿರುವ ಮುಸ್ಲಿಮ್ ಸಮುದಾಯದ 2ಬಿ ಮೀಸಲಾತಿಯನ್ನು ರಾಜ್ಯ ಸರಕಾರ ರದ್ದುಗೊಳಿಸಿರು ವುದು ಮತೀಯ ತಾರತಮ್ಯ ಮತ್ತು ಸಮುದಾಯವನ್ನು ಶೈಕ್ಷಣಿಕ ಹಕ್ಕುಗಳಿಂದ ವಂಚಿಸುವ ಪ್ರಯತ್ನವಾಗಿದೆ. ಮುಸ್ಲಿಮರ ಹಕ್ಕನ್ನು ಕಸಿದು ಒಕ್ಕಲಿಗ ಮತ್ತು ಲಿಂಗಾಯಿತ ಸಮುದಾಯಗಳಿಗೆ ಹಂಚಿರುವುದು ಅನ್ಯಾಯದ ಪರಮಾವಧಿಯಾಗಿದೆ. ರಾಜ್ಯ ಸರಕಾರ ತಕ್ಷಣ ಮುಸ್ಲಿಮ್ ಸಮುದಾಯದ ಮೀಸಲಾತಿಯನ್ನು ಮರು ಸ್ಥಾಪಿಸ ಬೇಕು ಎಂದು ಒತ್ತಾಯಿಸಿದ್ದಾರೆ.

Similar News