ರಾಜ್ಯದಲ್ಲಿ ಮುಂದಿನ 3 ದಿನ ಗುಡುಗು ಮಿಂಚು ಸಹಿತ ಮಳೆ ಸಾಧ್ಯತೆ

Update: 2023-03-26 15:13 GMT

ಬೆಂಗಳೂರು: ರಾಜ್ಯದಲ್ಲಿ ಮುಂದಿನ 3 ದಿನ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಹಲವೆಡೆ ಪೂರ್ವ ಮುಂಗಾರು ಆಲಿಕಲ್ಲು ಮಳೆ ಸುರಿಯಲಿದೆ. 

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಹಾಸನ, ಮೈಸೂರು ಹಾಗೂ ರಾಮನಗರದಲ್ಲಿ ಸೋಮವಾರದಿಂದ ಮಾ.29ರವರೆಗೆ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೊಡಗು, ಬಳ್ಳಾರಿ, ಕಲಬುರಗಿ, ರಾಯಚೂರು ಮತ್ತು ಬೀದರ್‍ನಲ್ಲಿ ರವಿವಾರ ಸಾಧಾರಣ ಮಳೆಯಾಗಿದೆ. 

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ ಏರಿಳಿತವಾಗಿದೆ. ಕಲಬುರಗಿಯಲ್ಲಿ ರವಿವಾರ 38.2 ಡಿಗ್ರಿ ಸೆಲ್ಸಿಯಸ್ ಅಧಿಕ ತಾಪಮಾನ ದಾಖಲಾಗಿತ್ತು. ಧಾರವಾಡದಲ್ಲಿ ಕಡಿಮೆ ತಾಪಮಾನ 15.6 ಉಷ್ಣಾಂಶ ವರದಿಯಾಗಿದೆ. ಮಾ.27 ರಿಂದ ಮಾ.29ರವರೆಗೆ ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ ಎಂದು ಮಾಹಿತಿ ಹವಮಾನ ವಿಜ್ಞಾನಿ ಪ್ರಸಾದ್ ಹೇಳಿದ್ದಾರೆ.

ಇದನ್ನೂ ಓದಿ: ಡಿ.ಕೆ. ಶಿವಕುಮಾರ್ ಅವರಿಗೆ ತಾಕತ್ತು ಇದ್ದರೆ ಮೀಸಲಾತಿ ರದ್ದುಪಡಿಸಲಿ: ಸಚಿವ ಆರ್. ಅಶೋಕ್ ಸವಾಲು

Similar News