ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಗುಬ್ಬಿ ಜೆಡಿಎಸ್‌ ಶಾಸಕ ಎಸ್‌.ಆರ್‌.ಶ್ರೀನಿವಾಸ್‌

Update: 2023-03-27 05:01 GMT

ತುಮಕೂರು, ಮಾ.27: ಗುಬ್ಬಿ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಶಾಸಕ ಎಸ್‌.ಆರ್‌.ಶ್ರೀನಿವಾಸ್‌ (ವಾಸು) ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಈ ಬಗ್ಗೆ ವಿಧಾನಸಭೆ ಸಬಾಧ್ಯಕ್ಷರಿಗೆ ಪತ್ರ ಬರೆದಿರುವ ಶ್ರೀನಿವಾಸ್‌, ಸ್ವ ಇಚ್ಛೆಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಉಲ್ಲೇಖಿಸಿದ್ದಾರೆ.

ಜೆಡಿಎಸ್‌ನಲ್ಲಿ ಅಸಮಾಧಾನಗೊಂಡಿರುವ ಬಗ್ಗೆ ಬಹಿರಂಗವಾಗಿಯೇ ಹೇಳಿಕೊಂಡಿದ್ದ ಅವರು, ಪಕ್ಷ ತೊರೆಯುವ ಬಗ್ಗೆಯೂ ಹೇಳಿಕೆ ನೀಡಿದ್ದರು. ಇದೀಗ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್‌ ಸೇರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ನಾಲ್ಕು ಬಾರಿ ಶಾಸಕರಾಗಿರುವ ಶ್ರೀನಿವಾಸ್‌ ಅವರು ಮೊದಲಿಗೆ ಪಕ್ಷೇತರರಾಗಿ ವಿಧಾನಸಭೆ ಪ್ರವೇಶಿಸಿದ್ದರು. ಬಳಿಕ ಜೆಡಿಎಸ್ ಸೇಪರ್ಡೆಗೊಂಡಿದ್ದ ಅವರು ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾಗಿದ್ದರು.

Similar News