ಯಡಿಯೂರಪ್ಪರ ನಿವಾಸದ ಮೇಲೆ ಕಲ್ಲು ತೂರಾಟದ ಹಿಂದೆ ಸ್ಥಳೀಯ ಕಾಂಗ್ರೆಸ್ ಮುಖಂಡರ ಕೈವಾಡ: ಸಿಎಂ ಬೊಮ್ಮಾಯಿ ಆರೋಪ

Update: 2023-03-27 10:31 GMT

ಚಿಕ್ಕಬಳ್ಳಾಪುರ: 'ಮಾಜಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರ ಶಿಕಾರಿಪುರದ ಮನೆ ಮೇಲೆ ನಡೆದಿರುವ ಕಲ್ಲು ತೂರಾಟದ ಹಿಂದೆ ಶಿವಮೊಗ್ಗದ ಸ್ಥಳೀಯ ಕಾಂಗ್ರೆಸ್ ಮುಖಂಡರ ಪ್ರಚೋದನೆ ಇದೆ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ನಾವು ಸದಾಶಿವ ವರದಿಯಂತೆ ಮೀಸಲಾತಿ ಅನುಷ್ಠಾನ ಮಾಡಿಲ್ಲ. ನಮ್ಮ ಸಚಿವ ಸಂಪುಟ ತೀರ್ಮಾನದಂತೆ ಮಾಡಿದ್ದೇವೆ. ಕಾಂಗ್ರೆಸ್ ನವರ ಕೃತ್ಯವನ್ನು ಖಂಡಿಸುತ್ತೇನೆ. ಬಂಜಾರ ಸಮಾಜ ಪ್ರಕ್ಷುಬ್ಧಗೊಳಿಸುವಂತಹ ಕೆಲಸ ಮಾಡಬಾರದು' ಎಂದು ಮ ಮನವಿ ಮಾಡಿದರು.

''ರಾಜಕೀಯ ಲಾಭಕ್ಕಾಗಿ ಇಂತಹ ಕೃತ್ಯ ಮಾಡುತ್ತಿದ್ದಾರೆ''

''ಒಂದು ರಾಷ್ಟ್ರೀಯ ಪಕ್ಷ ಮಾಡುವಂತಹ ಕೆಲಸವಲ್ಲ. ಈ ಕೃತ್ಯ ಕ್ಷಮೆಗೆ ಅರ್ಹವಲ್ಲ. ಕಾಂಗ್ರೆಸ್ ರಾಜಕೀಯ ಲಾಭಕ್ಕಾಗಿ ಇಂತಹ ಕೃತ್ಯ ಮಾಡುತ್ತಿದೆ. ಜನರ ಮಧ್ಯೆ ಜಗಳ ಹಚ್ಚುವ ಶಕುನಿ ಕೆಲಸ ಮಾಡುತ್ತಿರುವ ಬಗ್ಗೆ ಸುರ್ಜೇವಾಲಾ ಅವರು ಹೇಳಬೇಕು'' ಎಂದು ಹೇಳಿದರು.

Similar News