ಯಡಿಯೂರಪ್ಪರ ನಿವಾಸಕ್ಕೆ ಮುತ್ತಿಗೆ ಯತ್ನ, ಕಲ್ಲು ತೂರಾಟ: ಶಿಕಾರಿಪುರದಲ್ಲಿ ನಿಷೇಧಾಜ್ಞೆ ಜಾರಿ

Update: 2023-03-27 10:58 GMT

ಶಿವಮೊಗ್ಗ, ಮಾ.27: ಪರಿಶಿಷ್ಟ ಸಮುದಾಯಗಳಲ್ಲಿ ಒಳ ಮೀಸಲಾತಿ ನೀಡಿಕೆಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಸದಾಶಿವ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡುವ ಸರ್ಕಾರದ ನಿರ್ಧಾರ ವಿರೋಧಿಸಿ ಬಂಜಾರಾ ಸಮುದಾಯದವರು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿ ಉದ್ವಿಗ್ನ ಪರಿಸ್ಥಿತಿಯುಂಟಾಗಿದೆ. ಈ ಹಿನ್ನೆಲೆಯಲ್ಲಿ ಶಿಕಾರಿಪುರ ಪಟ್ಟಣಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಘಟನೆಯಲ್ಲಿ ಸರ್ಕಲ್‌ ಇನ್‌ಸ್ಪೆಕ್ಟರ್ ಸೇರಿದಂತೆ ನಾಲ್ವರು ಪೊಲೀಸರು ಕಲ್ಲೇಟಿನಿಂದ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.  

ಸದ್ಯ ಪರಿಸ್ಥಿತಿ ತಹಬದಿಗೆ ಬಂದಿದ್ದು, ಮುಂಜಾಗೃತಾ ಕ್ರಮವಾಗಿ ಶಿಕಾರಿಪುರ ಪಟ್ಟಣದಲ್ಲಿ 144 ಸೆಕ್ಷಣ್ ಅಡಿಯಲ್ಲಿ ತಹಶೀಲ್ದಾರ್ ವಿಶ್ವನಾಥ್ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ. 

Similar News