ಪ್ರಜಾಪ್ರಭುತ್ವ ಬಲಪಡಿಸುವ ಜವಾಬ್ದಾರಿ ಯುವಜನರ ಮೇಲಿದೆ: ಕೆ.ಅಣ್ಣಾಮಲೈ

ಸುಳ್ಯ ಕೆವಿಜಿ ಮೆಡಿಕಲ್ ಕಾಲೇಜಿನಲ್ಲಿ ಯುವ ಸಂವಾದ

Update: 2023-03-27 14:26 GMT

ಸುಳ್ಯ: ದೇಶದ ಸಮಸ್ಯೆಗಳನ್ನು ಪರಿಹರಿಸಿ, ರಾಜಕೀಯ ವ್ಯವಸ್ಥೆಯನ್ನು ಸರಿಪಡಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವ ಜವಾಬ್ದಾರಿ ಯುವಜನರ ಮೇಲಿದೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಹೇಳಿದ್ದಾರೆ.

ಸುಳ್ಯ ಕೆವಿಜಿ ಮೆಡಿಕಲ್ ಕಾಲೇಜಿನಲ್ಲಿ ಸೋಮವಾರ ನಡೆದ ಯುವ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮುಂದಿನ 25 ವರ್ಷಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಭಾರತದ ಅಮೃತ ಕಾಲ ಎಂದು ಘೋಷಿಸಿದ್ದಾರೆ. ಆಂತರಿಕ ಸಮಸ್ಯೆಗಳನ್ನು ಪರಿಹರಿಸಿ ದೇಶವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಿ 2047ರಲ್ಲಿ ಭಾರತವನ್ನು ಜಗತ್ತಿನ ನಂಬರ್‍ವನ್ ರಾಷ್ಟ್ರವನ್ನಾಗಿ ರೂಪಿಸುವುದು ಗುರಿ ಎಂದು ಅವರು ಹೇಳಿದರು. 

ಬಳಿಕ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಯುವ ಸಂವಾದ ಕಾರ್ಯಕ್ರಮದ ಸಂಯೋಜಕ ಬ್ರಿಜೇಶ್ ಚೌಟ, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‍ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ, ಕೆವಿಜಿ ಮೆಡಿಕಲ್ ಕಾಲೇಜಿನ ಡೀನ್ ನೀಲಾಂಬಿಕೈ ನಟರಾಜನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನೀಲಾಂಬಿಕೈ ನಟರಾಜನ್ ಸ್ವಾಗತಿಸಿ, ಅಕ್ಷಯ್ ಕೆ.ಸಿ.ವಂದಿಸಿದರು. ಪ್ರಿಯಾಂಕ ಹಾಗು ಕುಲ್‍ದೀಪ್ ಕಾರ್ಯಕ್ರಮ ನಿರೂಪಿಸಿದರು.

Similar News