ಮಾ.28ರಂದು ಪಾಲಿಕ್ಲಿನಿಕ್ ನ ನೂತನ ಕಟ್ಟಡ ಲೋಕಾರ್ಪಣೆ

Update: 2023-03-27 14:40 GMT

ಮಂಗಳೂರು: ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಪಶು ವೈದ್ಯಕೀಯ ಸೇವಾ ಇಲಾಖೆ ಸಹಕಾರದೊಂದಿಗೆ ಕೊಡಿಯಾಲ್ ಬೈಲ್‌ನ ಜೈಲ್ ರಸ್ತೆಯಲ್ಲಿ ಜಿಲ್ಲಾ ಪಶುವೈದ್ಯಕೀಯ ಪಾಲಿಕ್ಲಿನಿಕ್ ನೂತನ ಕಟ್ಟಡವನ್ನು ಮಾ.28ರ ಬೆಳಗ್ಗೆ 10ಕ್ಕೆ ಉದ್ಘಾಟನೆಗೊಳ್ಳಲಿದೆ.

ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸುವರು.

ಪಶುಸಂಗೋಪನಾ ಸಚಿವರಾದ ಪ್ರಭು ಬಿ ಚವ್ಹಾಣ್, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ಸಚಿವ ಎಸ್ ಅಂಗಾರ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ ಗೌರವ ಉಪಸ್ಥಿತಿಯನ್ನು ವಹಿಸುವರು. ಶಾಸಕ ಡಿ.ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸುವರು.

ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್, ರಾಜ್ಯಸಭಾ ಸಂಸದ ಡಾ. ವೀರೇಂದ್ರ ಹೆಗ್ಗಡೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ, ಮಂಗಳೂರಿನ ಶಾಸಕ ಯು.ಟಿ.ಖಾದರ್ ಡಾ.ಭರತ್ ಶೆಟ್ಟಿ ವೈ, ಹರೀಶ್ ಪೂಂಜ, ರಾಜೇಶ್ ನಾಯ್ಕ್ ಯು,  ಉಮಾನಾಥ ಎ.ಕೋಟ್ಯಾನ್,ಸಂಜೀವ ಮಠಂದೂರು, ಕರ್ನಾಟಕ ವಿಧಾನ ಪರಿಷತ್ ಶಾಸಕ ಬಿ.ಎಂ.ಫಾರೂಕ್, ಕೆ ಹರೀಶ್ ಕುಮಾರ್, ಆಯನೂರು ಮಂಜುನಾಥ, ಎಸ್.ಎಲ್. ಭೋಜೇಗೌಡ, ಕೆ.ಪ್ರತಾಪ್ ಸಿಂಹ ನಾಯಕ್, ಡಾ. ಮಂಜುನಾಥ ಭಂಡಾರಿ,  ಮಹಾಪೌರ ಜಯನಂದ ಅಂಚನ್, ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮದ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ. ತೀರ್ಥರಾಮ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್ ಮಿಜಾರು, ಮಂಗಳೂರು ಮಹಾನಗರ ಪಾಲಿಕೆ ಸದಸ್ಯ ಸುಧೀರ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

Similar News