ಹಾವೇರಿ ಕಾಂಗ್ರೆಸ್​​​ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಎಂ.ಎಂ.ಹಿರೇಮಠ

Update: 2023-03-28 08:34 GMT

ಹಾವೇರಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ರಾಜೀನಾಮೆ ಪರ್ವ ಆರಂಭವಾಗಿದೆ. ಅದರಂತೆ ಹಾವೇರಿ ಕಾಂಗ್ರೆಸ್​​​ ಜಿಲ್ಲಾಧ್ಯಕ್ಷ ಸ್ಥಾನ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಎಂ.ಎಂ.ಹಿರೇಮಠ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. 

ಈ ಕುರಿತಂತೆ ಹಿರೆಮಠ ಅವರು ತಮ್ಮ ರಾಜೀನಾಮೆ ಪತ್ರವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ​ ಅವರಿಗೆ ರವಾನಿಸಿದ್ದಾರೆ. 

ಹಿರೇಮಠ ಅವರು ಹಾವೇರಿ ಮೀಸಲು ಕ್ಷೇತ್ರಕ್ಕೆ (ಎಸ್ ಸಿ) ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರೆನ್ನಲಾಗಿದ್ದು, ಆದರೆ, ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಮಾಜಿ ಸಚಿವ ರುದ್ರಪ್ಪ ಲಮಾಣಿ ಹೆಸರನ್ನು ಘೋಷಿಸಲಾಗಿದೆ. ಇದರಿಂದ ಅಸಮಾಧಾನಗೊಂಡಿರುವ ಅವರು ಜಿಲ್ಲಾಧ್ಯಕ್ಷ ಸ್ಥಾನ ಮತ್ತು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. 

ರಾಜೀನಾಮೆ ಪತ್ರದಲ್ಲೇನಿದೆ?  ಕಾಂಗ್ರೇಸ್ ಪಕ್ಷವು ನನಗೆ ನೀಡಿದ ಹಾವೇರಿ ಜಿಲ್ಲಾ ಕಾಂಗ್ರೆಸ್‌ ಜಿಲ್ಲಾ ಅಧ್ಯಕ್ಷ ಹುದ್ದೆಯನ್ನು 4ವರ್ಷಗಳಿಂದ ಉತ್ತಮ ರೀತಿಯನ್ನು ಕಾರ್ಯನಿಭಾಯಿಸಿಕೊಂಡು ಬಂದಿರುವೆ, ನನಗೆ ಈಗ ನಿಭಾಯಿಸಲು ಸಾಧ್ಯವಾಗುತ್ತಿಲ್ಲ ಆದ್ದರಿಂದ ನನ್ನ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಕಾಂಗ್ರೇಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸಂಖ್ಯೆ 2021394 ಇವೆರಡಕ್ಕೂ ನನ್ನ ರಾಜೀನಾಮೆ ನೀಡುತ್ತಿದ್ದನೆ. ಆದರಿಂದ ನನ್ನ ರಾಜೀನಾಮೆ ಪತ್ರವನ್ನು ಅಂಗೀಕರಿಸಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ. 

ಇದನ್ನೂ ಓದಿವಿಧಾನಸಭಾ ಚುನಾವಣೆ: ಕಾಂಗ್ರೆಸ್‌ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿ ಬಿಡುಗಡೆ

Similar News