ಬಿಎಸ್ ವೈ ಮನೆಯ ಮೇಲಿನ ದಾಳಿಯ ಹಿಂದೆ ಬಿಜೆಪಿಯ "ಸಂತೋಷ ಕೂಟ"ದ ಕೈವಾಡ ಇರುವುದು ನಿಶ್ಚಿತ: ಕಾಂಗ್ರೆಸ್

Update: 2023-03-28 11:12 GMT

ಒಳಮೀಸಲಾತಿ ವಿಚಾರವಾಗಿ ಬಂಜಾರ ಸಮುದಾಯದ ಪ್ರತಿಭಟನೆ ವೇಳೆ ಶಿಕಾರಿಪುರದ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ನಿವಾಸಕ್ಕೆ ಕಲ್ಲು ತೂರಾಟ ಮಾಡಿದ ಘಟನೆಯ ಹಿಂದೆ ಬಿಜೆಪಿಯ "ಸಂತೋಷ ಕೂಟ"ದ ಕೈವಾಡ ಇರುವುದು ನಿಶ್ಚಿತ ಎಂದು ವಿಪಕ್ಷ ಕಾಂಗ್ರೆಸ್ ಆರೋಪಿಸಿದೆ.  

ಈ ಕುರಿತುಟ್ವೀಟ್ ಮಾಡಿರುವ ಕಾಂಗ್ರೆಸ್,  ಬಿಎಸ್ ವೈ ಅವರು ಮುಖ್ಯಮಂತ್ರಿಯಲ್ಲ, ಸರ್ಕಾರದ ನಿರ್ದಾರಗಳಲ್ಲಿ ಅವರ ಪಾತ್ರವಿಲ್ಲ, ಆದರೂ ಸರ್ಕಾರದ ಅವಾಂತರಕ್ಕೆ ಬಿಎಸ್ ವೈ ಮನೆ ಮೇಲೆ ದಾಳಿ ಆಗಿದ್ದೇಕೆ? ಎಂದು ಸಂಶಯ ವ್ಯಕ್ತಪಡಿಸಿದೆ. 

''ಗುಪ್ತಚರ ಇಲಾಖೆ, ಪೊಲೀಸ್ ಇಲಾಖೆ ಕಣ್ಮುಚ್ಚಿ ಕುಳಿತಿದ್ದೇಕೆ ಎನ್ನುವುದೇ ಯಕ್ಷಪ್ರಶ್ನೆ. BSY ಮನೆಯ ಮೇಲಿನ ದಾಳಿಯ ಹಿಂದೆ ಬಿಜೆಪಿಯ "ಸಂತೋಷ ಕೂಟ"ದ ಕೈವಾಡ ಇರುವುದು ನಿಶ್ಚಿತ'' ಎಂಬು ಕಾಂಗ್ರೆಸ್ ದೂರಿದೆ. 

''ಕಾನೂನು ಸುವ್ಯವಸ್ಥೆ ಉಲ್ಲಂಘನೆಯ ಪ್ರಕರಣಗಳು, ಗಲಭೆ, ಘರ್ಷಣೆಗಳೆಲ್ಲದರ ಬೀಜ ಬಿತ್ತುವುದು ಗೃಹಸಚಿವರ ತವರು ಜಿಲ್ಲೆ ಶಿವಮೊಗ್ಗದಲ್ಲೇ ಏಕೆ? ತನ್ನ ತವರಿನಲ್ಲಿ, ಅದರಲ್ಲೂ ಮಾಜಿ ಸಿಎಂ ಮನೆ ಬಳಿ ಕಾನೂನು ಸುವ್ಯವಸ್ಥೆ ಕಾಪಾಡಲಾಗದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರದ್ದು ಹೊಣೆಗೇಡಿತನವೋ ಅಥವಾ "ಸಂತೋಷ ಕೂಟ"ವನ್ನು ಮೆಚ್ಚಿಸುವ ಷಡ್ಯಂತ್ರವೋ?'' ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ. 

Similar News