ಪುತ್ತೂರು: 2ಬಿ ಮೀಸಲಾತಿ ರದ್ಧತಿ ಖಂಡಿಸಿ ಪ್ರತಿಭಟನೆ

Update: 2023-03-28 13:11 GMT

ಪುತ್ತೂರು: ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯಕ್ಕೆ ಇದ್ದ ಮೀಸಲಾತಿಯನ್ನು ರದ್ದು ಮಾಡಿದ ನಿರ್ಣಯವನ್ನು ಖಂಡಿಸಿ ರಾಜ್ಯ ಬಿಜೆಪಿ ಸರ್ಕಾರ ವಿರುದ್ಧ ಎಸ್ ಡಿ ಪಿ ಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಮಾ.28ರಂದು ಪುತ್ತೂರು ಕಿಲ್ಲೆ ಮೈದಾನದ ಅಮರ್ ಜವಾನ್ ಸ್ಮಾರಕ ಜ್ಯೋತಿ ಬಳಿ ಪ್ರತಿಭಟನೆ ನಡೆಯಿತು.

ಮುಸ್ಲಿಂಮರಿಗೆ ಪ್ರವರ್ಗ 2ಬಿ ಅಡಿಯಲ್ಲಿದ್ದ ಶೇ 4ರಷ್ಟು ಮೀಸಲಾತಿಯನ್ನು ರದ್ದು ಮಾಡಿರುವುದು ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಮಾಡಿರುವ ಉದ್ದೇಶಿತ ದಾಳಿಯಾಗಿದೆ. ಇದು ಸರ್ಕಾರದ ಅಸಂವಿಧಾನಿಕ ತೀರ್ಮಾನವಾಗಿದೆ. ಮುಸ್ಲಿಮರ ವಿರುದ್ಧ ಸರ್ಕಾರ ನಡೆಸುವ ಷಡ್ಯಂತ್ರ ಇದಾಗಿದ್ದು, ಬಿಜೆಪಿ ತನ್ನ ಕೋಮುವಾದಿತನವನ್ನು ಪದೇ ಪದೇ ಪ್ರದರ್ಶಿಸುತ್ತಲೇ ಇದೆ. ಬರುವ ಚುನಾವಣೆಯಲ್ಲಿ ಇದರ ಪರಿಣಾಮ ಬಿಜೆಪಿ ಎದುರಿಸಬೇಕಾದಿತು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಸ್‌ಡಿಪಿಐ ರಾಜ್ಯ ಸಮಿತಿ ಸದಸ್ಯ ಅಬ್ದುಲ್ ಮಜೀದ್ ಖಾನ್, ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಇಬ್ರಾಹಿಂ ಸಾಗರ್, ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಉಪಾಧ್ಯಕ್ಷ ಅಬ್ದುಲ್ ಹಮೀದ್ ಸಾಲ್ಮರ ಅವರು ಮಾತನಾಡಿದರು.

ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಮುಖಂಡರಾದ ಅಶ್ರಫ್ ಬಾವು, ಪ್ರಧಾನ ಕಾರ್ಯದರ್ಶಿ ರಹೀಮ್, ಕಬಕ ಗ್ರಾ.ಪಂ ಸದಸ್ಯ ಪಾರೂಕ್ ಕಬಕ, ಉಪ್ಪಿನಂಗಡಿ ಗ್ರಾ.ಪಂ ಸದಸ್ಯ ರಶೀದ್ ಪುಣ್ಚಪ್ಪಾಡಿ, ವಿಶ್ವನಾಥ್ ಪುಣ್ಚತ್ತಾರ್, ಪಿಬಿಕೆ ಮಹಮ್ಮದ್ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

Similar News